ಬಂಟ್ವಾಳ : ಭಾರತ ಜಗತ್ತಿನಲ್ಲಿಯೇ ಅತ್ಯಂತ ಪ್ರಬಲ ದೇಶ ಎಂಬುದನ್ನು ಪ್ರಕೃತಿಯೇ ತೋರಿಸಿಕೊಟ್ಟಿದೆ. ಮಹಾಮಾರಿಯಾಗಿ ಕಾಣಿಸಿಕೊಂಡ ಕೊರೋನಾ ನಿಗ್ರಹದ ಹೋರಾಟವೇ ಇದಕ್ಕೆ ನಿದರ್ಶನ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ಮಿನಿವಿಧಾನ ಸೌಧದಲ್ಲಿ ಮಂಗಳವಾರ ನಡೆದ ಬಂಟ್ವಾಳ ತಾಲೂಕು ಮಟ್ಟದ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 

ಕೊರೋನಾ ಲಸಿಕೆಯಿ‌ಂದ ತೊಡಗಿ ಭಾರತದ ಪ್ರತಿಯೊಂದು‌ ಪ್ರಗತಿಯುತ ಬೆಳವಣಿಗೆಯನ್ನು ಇಡೀ ವಿಶ್ವವೇ ಗಮನಿಸುತ್ತಿದ್ದು, ಅಂಬೇಡ್ಕರ್, ಬಸವಣ್ಣ, ಗಾಂಧೀಜಿಯವರ ಚಿಂತನೆಗಳೊಂದಿಗೆ ಇದು ಸಾಕಾರಗೊಳ್ಳಲಿ ಎಂದರು.

ಧ್ವಜಾರೋಹಣ ನೆರವೇರಿಸಿದ ತಾಲೂಕು ತಹಶೀಲ್ದಾರ್ ರಶ್ಮೀ ಎಸ್.ಆರ್ ಮಾತನಾಡಿ, ದೇಶದ ಅಭಿವೃದ್ಧಿ ಪ್ರತಿಯೊಬ್ಬ ಭಾರತೀಯನ ಜವಬ್ದಾರಿಯಾಗಿದ್ದು , ಸ್ವಾರ್ಥ ಮತ್ತು ಅಹಂ ತೊರೆದಾಗ ಇದು ಸಾಧ್ಯ ಎಂದರು. ಅಧಿಕಾರಿ ವರ್ಗವೂ ತಮ್ಮೊಳಗಿನ ತಾರತಮ್ಯಗಳನ್ನು‌ ಬಿಟ್ಟು ನಿಷ್ಠೆಯ ಕಾರ್ಯದಲ್ಲಿ ತೊಡಗಿದಾಗ ನಿಜವಾದ ಪ್ರಗತಿ ಸಾಧ್ಯ ಎಂದರು.

ಮುಖ್ಯಭಾಷಣಗೈದ ಶಿಕ್ಷಕ ಶಿವಕುಮಾರ್ ಮಾತನಾಡಿ, ಸಂವಿಧಾನದ ಅರಿವು ಪ್ರತಿಯೊಬ್ಬರಲ್ಲೂ ಇರಬೇಕು, ಇದಕ್ಕೆ ಪೂರಕವಾಗಿ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಕೊಟ್ಟ ಸಂವಿಧಾನದ ವಿಚಾರಧಾರೆಗಳನ್ನು ತಿಳಿಸುವಂತಾಗಬೇಕು ಎಂದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಅಲಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ಶೆಟ್ಟಿ, ಪುರಸಭಾ ಅಧ್ಯಕ್ಷ ಮಹಮ್ಮದ್ ಶರೀಫ್, ಉಪಾಧ್ಯಕ್ಷೆ ಜೆಸಿಂತಾ ಡಿಸೋಜ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಡಿವೈಎಸ್ಪಿ ವೆಲೈಂಟೀನ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾ.ಪಂ.ಕಾರ್ಯ‌ನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ವಂದಿಸಿದರು. ಮಂಜುವಿಟ್ಲ ಕಾರ್ಯಕ್ರ‌ಮ ನಿರ್ವಹಿಸಿದರು. ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಸಹಕರಿಸಿದರು.

ಸಭಾಕಾರ್ಯಕ್ರಮಕ್ಕೆ ಮುನ್ನ ಪೊಲೀಸ್ ಗೃಹರಕ್ಷಕ ದಳದಿಂದ ಆಕರ್ಷಕ ಪಥಸಂಚಲನ ನಡೆಯಿತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here