Thursday, April 11, 2024

ಯುವಮೋರ್ಚಾ ವತಿಯಿಂದ ಬಿ.ಸಿ.ರೋಡಿನಲ್ಲಿ ಪಂಜಿನ ಮೆರವಣಿಗೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬಂಟ್ವಾಳ ವತಿಯಿಂದ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಭಾರತ ಮಾತೆಯ ಪಾದಗಳಿಗೆ ಪ್ರಾಣ ಅರ್ಪಿಸಿದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್ ಗುರು, ಮತ್ತು ಸುಖ್ ದೇವ್ ಅವರ ಸ್ಮರಣಾರ್ಥವಾಗಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಬಲಿದಾನ್ ದಿವಸ್ ಕಾರ್ಯಕ್ರಮ ಬಿಸಿರೋಡಿನಲ್ಲಿ ನಡೆಯಿತು.

ಮಂಗಳೂರು ವಿಭಾಗದ ಧರ್ಮ ಜಾಗರಣ ಸಹಸಂಯೋಜಕ್ ಪ್ರಕಾಶ್ ಮಲ್ಪೆ ಮಾತನಾಡಿ  ದಾರಿ ತಪ್ಪು ತ್ತಿರುವ ಯುವಪೀಳಿಗೆಗೆ ದೇಶಕ್ಕಾಗಿ ಹೋರಾಟ ಮಾಡಿದ ಭಗತ್ ಸಿಂಗ್ ರಂತಹ ಮಹಾನ್ ವ್ಯಕ್ತಿಗಳ ಕಥೆ ಹೇಳಬೇಕಾದ ಅನಿವಾರ್ಯತೆ ಇದೆ ಎಂದು ಅವರು ತಿಳಿಸಿದರು.

ಕೈಕಂಬ ಪೊಳಲಿ ದ್ವಾರದಿಂದ ಬಿಸಿರೋಡು ರಕ್ತೇಶ್ವರಿ ದೇವಸ್ಥಾನ ದ ವರೆಗೆ ಬಂದ ಪಂಜಿನ ಮೆರವಣಿಗೆಯನ್ನು ಕೈಕಂಬದಲ್ಲಿ ಉದ್ಘಾಟಿಸಿದ

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ ದೇಶಕ್ಕಾಗಿ ಸೇವೆಗೈದು ಬಲಿದಾನ ಮಾಡಿದ ವೀರಪುರಷರ ನೆನಪು ಮಾಡುವ ಕೆಲಸ ಬಿಜೆಪಿ ಯುವಮೋರ್ಚಾದಿಂದ ಆಗುತ್ತಿರುವುದು ಸಂತಸದ ವಿಚಾರ.

ಈ ಸಂದರ್ಭದಲ್ಲಿ ಬಂಟ್ವಾಳ ಬೂಡ ಅಧ್ಯಕ್ಷ ದೇವದಾಸ ಬಂಟ್ವಾಳ, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಪುರಸಭಾ ಸದಸ್ಯರಾದ ಎ.ಗೋವಿಂದ ಪ್ರಭು, ಹರಿಪ್ರಸಾದ್ , ಗ್ರಾ.ಪಂ.ಸದಸ್ಯ ರಾದ ತನಿಯಪ್ಪ ಗೌಡ,ಕಾರ್ತಿಕ್ ಬಲ್ಲಾಳ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ದಾಸ್ ಬಂಟ್ವಾಳ,

ಯುವಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಬಜ, ಬಂಟ್ವಾಳ ಯುವಮೋರ್ಚಾ ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಪಕ್ಷದ ಪ್ರಮುಖ ರಾದ ಸುಲೋಚನ ಜಿ.ಕೆ.ಭಟ್, ಡೊಂಬಯ್ಯ ಅರಳ, ದಿನೇಶ್ ಅಮ್ಟೂರು, ಕೇಶವ ದೈಪಲ, ಸದಾನಂದ ರಂಗೋಲಿ, ಪುರುಷೋತ್ತಮ ಶೆಟ್ಟಿ ವಾಮದಪದವು, ಮೋನಪ್ಪ ದೇವಶ್ಯ, ರವೀಶ್ ಶೆಟ್ಟಿ ವಿಟ್ಲ, ರಮನಾಥ ರಾಯಿ, ಪುರುಷೋತ್ತಮ್ ಸಾಲಿಯಾನ್ ನರಿಕೊಂಬು , ಗಣೇಶ್ ರೈ ಮಾಣಿ, ನಂದರಾಮ್ ರೈ, ಚರಣ್ ಜುಮಾದಿಗುಡ್ಡೆ,

ಪಲ್ಲಿಪಾಡಿ, ಪ್ರಣಾಮ್ ಅಜ್ಜಿಬೆಟ್ಟು, ಭರತ್ ಕುಮ್ಡೆಲು, ತನಿಯಪ್ಪ ಗೌಡ, ವಿನೀತ್ ಶೆಟ್ಟಿ, ಅಶ್ವತ್ ಅರಳ,ವಜ್ರನಾಥ ಕಲ್ಲಡ್ಕ, ಮತ್ತಿತರರು ಉಪಸ್ಥಿತರಿದ್ದರು.

ವಿನೋದ್ ಶೆಟ್ಟಿ ಪಟ್ಲ ಸ್ವಾಗತಿಸಿ, ಸುರೇಶ್ ಕೋಟ್ಯಾನ್ ವಂದಿಸಿದರು. ಕಿಶೋರ್ ಪಲ್ಲಿಪಾಡಿ ಕಾರ್ಯಕ್ರಮ ನಿರೂಪಿಸಿದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...