Saturday, April 6, 2024

ಪುಣಚ ಶ್ರೀ ಮಹಿಷಮರ್ದಿನಿ ದೇಗುಲದಲ್ಲಿ ಜಾತ್ರೋತ್ಸವ ಧ್ವಜಾರೋಹಣ

ವಿಟ್ಲ: ಪುಣಚ ಶ್ರೀಮಹಿಷಮರ್ದಿನಿ ದೇವಸ್ಥಾನದ ವರ್ಷಾವಧಿ ಜಾತ್ರೆಯು ಬುಧವಾರ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ವೈದಿಕ ಮಾರ್ಗದರ್ಶನಲ್ಲಿ ಧ್ವಜಾರೋಹಣ ನಡೆಯಿತು. ಧ್ವಜಾರೋಹಣದ ಬಳಿಕ ದೇವರ ನಿತ್ಯ ಬಲಿ, ಭೂತ ಬಲಿ ಉತ್ಸವ ನಡೆಯಿತು. ಅನ್ನಸಂತರ್ಪಣೆ, ಪ್ರಸಾದ ವಿತರಣೆ ನಡೆಯಿತು.
ಈ ಸಂದರ್ಭದಲ್ಲಿ ವಿಟ್ಲ ಅರಮನೆ ಅನುವಂಶಿಕ ಮೊಕ್ತೇಸರ ಪ್ರತಿನಿಧಿ, ಆಡಳಿತ ಮಂಡಳಿಯ ಅಧ್ಯಕ್ಷರಾದ ಎಸ್. ಆರ್. ರಂಗಮೂರ್ತಿ, ಉಪಾಧ್ಯಕ್ಷರಾದ ಮಾರಪ್ಪ ಶೆಟ್ಟಿ, ಕಾರ್‍ಯದರ್ಶಿ ಶ್ರೀಧರ ಶೆಟ್ಟಿ ದೇವರಗುಂಡಿ, ಕೋಶಾಧಿಕಾರಿ ಶಂಕರ್ ನಾರಾಯಣ ಭಟ್ ಮಲ್ಯ, ಆಡಳಿತ ಮಂಡಳಿ ಸದಸ್ಯರು, ಹಾಗೂ ಊರಪರವೂರ ಭಕ್ತರು ಭಾಗವಹಿಸಿದ್ದರು.
ಜಾತ್ರೋತ್ಸವದ ಅಂಗವಾಗಿ ಎ.8 ರಂದು ದೀಪ ಬಲಿ, ದರ್ಶನ ಬಲಿ, ಭೂತ ಬಲಿ ಉತ್ಸವ, ದೀಪ ಬಲಿ, ದರ್ಶನ ಬಲಿ, ಭೂತಬಲಿ, ಕೆರೆಕಟ್ಟೆ ಉತ್ಸವ, ಎ.10 ರಂದು ದೀಪ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಉತ್ಸವ ಬಲಿ, ದರ್ಶನ ಬಲಿ, ಬೆಡಿಕಟ್ಟೆ ಉತ್ಸವ, ಸಿಡಿಮದ್ದು ಪ್ರದರ್ಶನ, ಮೃಗಬೇಟೆ ಸವಾರಿ, ಭೂತಬಲಿ, ಎ.11 ರಂದು ಕವಾಟೋದ್ಘಾಟನೆ, ತುಲಾಭಾರ ಸೇವೆ, ರಾತ್ರಿ ಪಡುಪೇಟೆ ಸವಾರಿ, ಅವಭೃತ ಸ್ನಾನ, ಬಟ್ಟಲು ಕಾಣಿಕೆಯ ಬಳಿಕ ಧ್ವಜಾವರೋಹಣ ನಡೆಯಲಿದೆ. ಜಾತ್ರೋತ್ಸವ ಕೋವಿಡ್ ನಿಯಮದನ್ವಯ ನಡೆಯಲಿದ್ದು, ಜಾತ್ರೋತ್ಸವ ಪ್ರಯುಕ್ತ ಪ್ರತೀವರ್ಷದಂತೆ ನಡೆಯುತ್ತಿದ್ದ ಸಂತೆ ವ್ಯಾಪಾರವನ್ನು ನಿರ್ಬಂಧಿಸಲಾಗಿದೆ. ನಿಗದಿಯಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.

 

More from the blog

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...