Wednesday, October 18, 2023

ಇನ್ನೆರಡು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ : ಗಂಟೆಗೆ 155 ರಿಂದ 165 ಕಿ.ಮೀ ವೇಗದಲ್ಲಿ ಅಪ್ಪಳಿಸಲಿದೆ ಯಾಸ್ ಚಂಡಮಾರುತ

Must read

ತೌಕ್ತೆ ಚಂಡಮಾರುತದ ಬಳಿಕ ಇದೀಗ ಯಾಸ್ ಚಂಡಮಾರುತ ತನ್ನ ಆರ್ಭಟ ತೋರಿಸಲು ಸಜ್ಜಾಗಿದೆ, ಬಂಗಾಳಕೊಲ್ಲಿಯಲ್ಲಿ ವಾಯಭಾರದಿಂದ ಸೃಷ್ಟಿಯಾಗಿರುವ ಯಾಸ್ ಚಂಡಮಾರುತ ಇಂದು ಒರಿಸ್ಸಾ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಿಗೆ ಅಪ್ಪಳಿಸಲಿದೆ. ರಾಜ್ಯದಲ್ಲೂ ಕೂಡ ಯಾಸ್ ಚಂಡಮಾರುತದ ಪ್ರಭಾವ ಇರಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇನ್ನು ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಹಾಗೂ ರಾಜ್ಯದ ಒಳನಾಡಿನಲ್ಲಿ ಕೂಡ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಯಿಂದ ಯಾವುದೇ ಹಾನಿ ಆಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗಿದ್ದು, ಇನ್ನೂ ಒಂದೆರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಯಾಸ್ ಚಂಡಮಾರುತ ಗಂಟೆಗೆ 155 ರಿಂದ 165 ಕಿ.ಮೀ ವೇಗದಲ್ಲಿ ಇಂದು ಮಧ್ಯಾಹ್ನ ಒಡಿಶಾದ ಬಾಲಾಸೋರ್ ಗೆ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಂಗಾಳ ಹಾಗೂ ಒಡಿಶಾದಲ್ಲಿ ಲಕ್ಷಾಂತರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ.

More articles

Latest article