Tuesday, April 16, 2024

*ಇರ್ವತ್ತೂರು: ಅಸಂಘಟಿತ ಕಾರ್ಮಿಕರ ನೋಂದಣಿ ಹಾಗೂ ಕಂದಾಯ ಇಲಾಖಾ ಸವಲತ್ತುಗಳ ಮಾಹಿತಿ ಶಿಬಿರ*

ಬಂಟ್ವಾಳ: ಇರ್ವತ್ತೂರುಪದವು ಶ್ರೀ ಶಾರದೋತ್ಸವ ಸೇವಾ ಸಮಿತಿ ವತಿಯಿಂದ ಅಸಂಘಟಿತ ಕಾರ್ಮಿಕರ ನೋಂದಣಿ ಹಾಗೂ ಕಂದಾಯ ಇಲಾಖಾ ಸವಲತ್ತುಗಳ ಮಾಹಿತಿ ಶಿಬಿರ ಬುಧವಾರ ಮೂಡುಪಡುಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಮಿಕ ನಿರೀಕ್ಷಕಿ ಮರ್ಲಿನ್ ಗ್ರೇಸಿ ಸಲ್ದಾನ ಉದ್ಘಾಟಿಸಿದರು. ಇರ್ವತ್ತೂರು ಗ್ರಾಮ ಪಂಚಾಯತು ಅಧ್ಯಕ್ಷ ಎಂ.ಪಿ.ಶೇಖರ್ ಅಧ್ಯಕ್ಷತೆ ವಹಿಸಿದ್ದರು. ಪಿಲಾತಬೆಟ್ಟು ಗ್ರಾಮ ಪಂಚಾಯತು ಅಧ್ಯಕ್ಷೆ ಹರ್ಷಿಣಿ ಪುಷ್ಪಾನಂದ, ಚೆನ್ನೈತ್ತೋಡಿ ಗ್ರಾಮ ಪಂಚಾಯತು ಉಪಾಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಪತ್ರಕರ್ತ ಗೋಪಾಲ ಅಂಚನ್, ಪಂಚಾಯತು ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್., ಶಾಲಾ ಮುಖ್ಯ ಶಿಕ್ಷಕ ಸುನಿಲ್ ಸಿಕ್ವೇರಾ, ಸಮಿತಿ ಅಧ್ಯಕ್ಷ ಡಾ.ರಾಮಕೃಷ್ಣ ಎಸ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ‌‌ ಸೇವಾ, ಸಮಿತಿ ಸದಸ್ಯರಾದ ಸಂತೋಷ ದೋಟ,ಲೋಕೇಶ್ ಎರ್ಮೆನಾಡು, ಉಮೇಶ್ ಆಚಾರ್ಯ,ಶಶಿಧರ್ ನಾಯ್ಕ ಮಣ್ಣೂರು ಮೊದಲಾದವರಿದ್ದರು. ನಿವೃತ್ತ ಶಿಕ್ಷಕ ನಾರಾಯಣ ನಾಯ್ಕ್ ಕರ್ಪೆ ಕಂದಾಯ ಇಲಾಖಾ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಇದೇ ಸಂದರ್ಭ ಇರ್ವತ್ತೂರು ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ವರ್ಗಾವಣೆ ಹಿನ್ನೆಲೆಯಲ್ಲಿ ಸಮಿತಿ ವತಿಯಿಂದ ಅಭಿನಂದಿಸಲಾಯಿತು.

ಉಮೇಶ್ ಆಚಾರ್ಯ ಕುಮಂಗಿಲ ಪ್ರಾರ್ಥಿಸಿದರು. ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಂಕರ್ ಶೆಟ್ಟಿ ಬೆದ್ರಮಾರ್ ಸ್ವಾಗತಿಸಿದರು.

ಸಮಿತಿಯ ಕಾರ್ಯದರ್ಶಿ ದಯಾನಂದ ಎರ್ಮೆನಾಡು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

More from the blog

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ಮಾಜಿ ಸಚಿವ ಜನಾರ್ಧನ ಪೂಜಾರಿ ಅವರ ನಿವಾಸಕ್ಕೆ ತೆರಳಿ ಮತದಾನ ಪ್ರಕ್ರಿಯೆ

ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್‌ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದೆ. ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...