ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿ ಇಂದು ರಾಮಕೃಷ್ಣ ತಪೋವನ ಪೊಳಲಿ ಇವರ ವತಿಯಿಂದ ಪುಸ್ತಕ ವಿತರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೆಂಕಟೇಶ ನಾವುಡ ವಹಿಸಿದ್ದರು. ರಾಮಕೃಷ್ಣ ತಪೋವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ತಾಲೂಕು ಪಂಚಾಯಿತಿ ಮಾಜಿ ಸದಸ್ಯರ ಯಶವಂತ ಪೂಜಾರಿ ಅವರು ಉಪಸ್ಥಿತರಿದ್ದರು. ಶಾಲೆಯ ಮುಖ್ಯಸ್ಥರಾದ ರಾಧಾಕೃಷ್ಣ ಭಟ್ ಸ್ವಾಗತಿಸಿದರು. ವಸಂತಿ ವಂದಿಸಿದರು. ಜಾನೆಟ್ ಲೋಬೊ ಕಾರ್ಯಕ್ರಮ ನಿರೂಪಿಸಿದರು.