Thursday, January 29, 2026

ತೋಟಗಾರಿಕ ಇಲಾಖೆ ಮೂಲಕ ಯಂತ್ರಿಕೃತ ಕಟಾವು ಯಂತ್ರದ ವಿತರಣೆ: ರಾಜೇಶ್ ನಾಯ್ಕ್

ತೋಟಗಾರಿಕೆ ಇಲಾಖೆ ಮೂಲಕ ಅನುಷ್ಟಾಗೊಳ್ಳುವ ಎಣ್ಣೆ ತಾಳೆ ವ್ಯವಸಾಯ ಯೋಜನೆಯಡಿ ಎಣ್ಣೆತಾಳೆ ಬೆಳೆ ಬೆಳೆದ ರೈತರಿಗೆ ಎಣ್ಣೆತಾಳೆಮರದ  ಗರಿಗಳನ್ನು ಹಾಗೂ  ಹಣ್ಣಿನ ಗೊಂಚಲುಗಳನ್ನು ಕಟಾವು ಮಾಡುವ ಯಾಂತ್ರೀಕೃತ ಕಟಾವು ಯಂತ್ರವನ್ನು ಬಂಟ್ವಾಳ ಶಾಸಕರಾದ ಸನ್ಮಾನ್ಯ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ರವರು ಫಲಾನುಭವಿಗಳಾದ ಅಮ್ಟಾಡಿ ಗ್ರಾಮದ ಶ್ರೀ ರೋಬರ್ಟ್ ಡಿಸೋಜ ಹಾಗೂ ರಾಯಿ ಗ್ರಾಮದ ಶ್ರೀ ವಿಕ್ಟರ್ ರೊಡ್ರಿಗಸ್ ರವರಿಗೆ ವಿತರಿಸಿದರು. ಖಾದ್ಯ ತೈಲ ಉತ್ಪಾದನೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸರಕಾರವು ಎಣ್ಣೆತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡುತ್ತಿದ್ದು ರೈತರು ಎಣ್ಣೆ ತಾಳೆ ಬೆಳೆಯಲು ಮುಂದೆ ಬರಬೇಕು ಎಂದು ಶಾಸಕರು ಕರೆ ನೀಡಿದರು. ಬಂಟ್ವಾಳ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀ ಜೋ ಪ್ರದೀಪ್ ಡಿಸೋಜ,  ಹಾಜರಿದ್ದರು

 

 

More from the blog

ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ ನೇಮಕ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗ, ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಯಶ್ ಕುಮಾರ್ ಶರ್ಮಾ, ಐಪಿಎಸ್ (ಕೆಎನ್ 2023) ನೇಮಿಸಲಾಗಿದೆ. ಬಳ್ಳಾರಿ ನಗರ ಉಪ ವಿಭಾಗ, ಬಳ್ಳಾರಿ ಜಿಲ್ಲೆಗೆ ಸಹಾಯಕ ಪೊಲೀಸ್...

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...