Tuesday, July 1, 2025

ಪೆರಾಜೆ ಅಶ್ವತ್ಥಡಿಯಲ್ಲಿ ಯುವ ವೇದಿಕೆ ನೇತೃತ್ವದಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣದ ಉದ್ಘಾಟನೆ

ಬಂಟ್ವಾಳ: ಪೆರಾಜೆ ಗ್ರಾಮ ದ ಅಶ್ವತ್ಥಡಿ ಎಂಬಲ್ಲಿ ಯುವ ವೇದಿಕೆ ನೇತೃತ್ವದಲ್ಲಿ ನೂತನವಾಗಿ ನಿರ್ಮಿಸಲಾದ ಬಸ್ ನಿಲ್ದಾಣದ ಉದ್ಘಾಟನೆ ಮತ್ತು ಲೋಕಾರ್ಪಣೆ ಕಾರ್ಯಕ್ರಮ ಇಂದು ಡಿ. 02 ರಂದು ನಡೆಯಿತು. ಬಸ್ ನಿಲ್ದಾಣದ ಉದ್ಘಾಟನೆ ಯನ್ನು ಸ್ಥಳೀಯ ಹಿರಿಯರಾದ ಸುರೇಂದ್ರ ಮತ್ತು ವಿಶ್ವನಾಥ್ ಅವರು ನೆರವೇರಿಸಿದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾದ ವಜ್ರನಾಥ ಕಲ್ಲಡ್ಕ, ಬಿಜೆಪಿ ಎಸ್.ಟಿ ಮೋರ್ಚಾ ಜಿಲ್ಲಾ ಅಧ್ಯಕ್ಷ ರಾದ ದಿನೇಶ್ ಅಮ್ಟೂರು, ಭಜರಂಗದಳದ ವಿಟ್ಲ ತಾಲೂಕು ಸಂಚಾಲಕ ರಾದ ಅಕ್ಷಯ್ ಕಲ್ಲಡ್ಕ. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ, ಸದಸ್ಯರಾದ ಉಮೇಶ್ ಎಸ್.ಪಿ.ಉದ್ಯಮಿ ಪುಷ್ಪರಾಜ್ ಚೌಟ, ಯುವ ವೇದಿಕೆ ಸಂಚಾಲಕ ರಾಜಾರಾಂ ಕಡೂರು. ಅಧ್ಯಕ್ಷ ಅಜಿತ್ ಬುಡೋಳಿ, ಕಾರ್ಯದರ್ಶಿ ಯತಿರಾಜ್ ಪೆರಾಜೆ, ಮತ್ತು ಸದಸ್ಯರು, ಊರಿನ ಹಿರಿಯರು ಉಪಸ್ಥಿತರಿದ್ದರು

More from the blog

ಕರಾವಳಿ ಮರಳು ನೀತಿ ರೂಪಿಸಲು ಒತ್ತಾಯಿಸಿ AICCTU ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಮತ್ತು ಕೆಂಪು ಕಲ್ಲು ಗಣಿಗಾರಿಕೆಯನ್ನು ಪೂರ್ತಿಯಾಗಿ ನಿಷೇಧ ಮಾಡಿರುವುದನ್ನು ಪ್ರಗತಿಪರ ದ.ಕ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ...

ನೆತ್ತರಕೆರೆ: ನವೋದಯ ಮಿತ್ರ ಕಲಾ ವೃಂದ (ರಿ) ನೂತನ ಅಧ್ಯಕ್ಷರಾಗಿ ಜಗದೀಶ್ ಎನ್ ಆಯ್ಕೆ..

ಬಂಟ್ವಾಳ : ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಸ್ಥೆ, ನವೋದಯ ಮಿತ್ರ ಕಲಾ ವೃಂದ (ರಿ) ನೆತ್ತರಕೆರೆ ಇದರ ವಾರ್ಷಿಕ ಮಹಾಸಭೆಯು ಜೂ 29ರಂದು ಸಂಘದ ಸಭಾಭವನದಲ್ಲಿ ನಡೆದು...

ಕೊಲೆಯತ್ನ ಪ್ರಕರಣ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ..

ಬಂಟ್ವಾಳ : ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಟ್ವಾಳದ ಬಿ ಮೂಡ ಗ್ರಾಮ ನಿವಾಸಿ ಅಕ್ಬರ್ ಸಿದ್ದಿಕ್ ಬಂಧಿತ ಆರೋಪಿ. 2011ನೇ ಸಾಲಿನಲ್ಲಿ ಬಂಟ್ವಾಳ ತುಂಬೆ ಗ್ರಾಮದ ಅರ್ಬನಗುಡ್ಡೆ ಎಂಬಲ್ಲಿ...

‘ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು’- ಒಡಿಯೂರು ಶ್ರೀ

ವಿಟ್ಲ: ಕೃಷಿ ಎಂಬುದು ಶ್ರೇಷ್ಠವಾಗಿದ್ದು, ಹೃದಯಕ್ಕೂ, ಭೂಮಿಯಲ್ಲಿಯೂ ಕೃಷಿ ನಡೆಯಬೇಕು. ಪ್ರತಿಯೊಂದಕ್ಕೂ ಸಂಸ್ಕಾರ ನೀಡುವ ಕಾರ್ಯವಾದಾಗ ಸುಸೂತ್ರವಾಗಿ ನಡೆಯುತ್ತದೆ. ಅಂತರಂಗದ ಕೃಷಿ, ಆಧ್ಯಾತ್ಮದ ಕೃಷಿ ಜತೆಗೆಯಾಗಿ ನಡೆಯಬೇಕು. ಆಧ್ಯಾತ್ಮದ ಜಾಗೃತಿಯಿಂದ ಬದುಕು ಸುಂದರವಾಗುತ್ತದೆ. ಕಲೆ,...