ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳು ಪಲ್ಸ್ ಪೋಲಿಯೊ ಅಭಿಯಾನದಲ್ಲಿ ಶೇಕಡ 100ರಷ್ಟು ಸಾಧನೆಗೈದಿದೆ.

ಆರೋಗ್ಯ ಇಲಾಖೆ ರಾಜ್ಯಾದ್ಯಂತ ಮೂರು ದಿನಗಳ ಪಲ್ಸ್ ಪೋಲಿಯೊ ಅಭಿಯಾನವನ್ನು ಹಮ್ಮಿಕೊಂಡಿತ್ತು. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ವಿಜಯನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಚಿತ್ರದುರ್ಗ, ರಾಮನಗರ, ಬೆಂಗಳೂರು ನಗರ, ದಾವಣಗೆರೆ, ಕೋಲಾರ, ಶಿವಮೊಗ್ಗ, ಕೊಪ್ಪಳ, ಮೈಸೂರು ಜಿಲ್ಲೆಗಳು ಶೇ.100 ಗುರಿ ತಲುಪಿದೆ.