Friday, July 4, 2025

ಮಾ.28ರಂದು (ಇಂದು) ಬಂಟ್ವಾಳ ಜಯರಾಮ ಆಚಾರ್ಯಗೆ ಆರಾಧನಾ ಪ್ರಶಸ್ತಿ ಪ್ರದಾನ

ಬಂಟ್ವಾಳ: ಆರಾಧನಾ ಫ್ರೆಂಡ್ಸ್ ಸರ್ಕಲ್ ಬಿ.ಸಿ.ರೋಡ್, ಬೈಪಾಸ್ ಇದರ ಆಶ್ರಯದಲ್ಲಿ ಯಕ್ಷಗಾನ ಬಯಲಾಟ,ಸನ್ಮಾನ ಸಮಾರಂಭ ,ಪ್ಋಇಭಾ ಪುರಸ್ಕಾರ ಕಾರ್ಯಕ್ರಮವು ಮಾ.28 ರಂದು ಸಂಜೆ 6 ಗಂಟೆಗೆ ಬಿ.ಸಿ.ರೋಡಿನ ಉದ್ಯಾನವನದ ಪಕ್ಕದ ಖಾಸಗಿ ಸಭಾಭವನದಲ್ಲಿ ನಡೆಯಲಿದೆ‌ ಎಂದು ಪ್ರಕಟಣೆ ತಿಳಿಸಿದೆ.33 ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆಯುವ ಈ ಕಾರ್ಯಕ್ರಮದಲ್ಲಿ ಯಕ್ಷರಂಗದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರಿಗೆ ಆರಾಧನಾ ಪ್ರಶಸ್ತಿ ಪ್ರಧಾನ ಮಾಡಲಾಗುವುದಲ್ಲದೆ,ಕಳೆದ 2019-20 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕಾಲಿನ ಸಹಾಯದಿಂದ ಪರೀಕ್ಷೆ ಬರೆದು 424 ಅಂಕಗಳಿಸಿದ ಕೌಶಿಕ್ ಮತ್ತು ಪಿಯುಸಿಯಲ್ಲಿ ಎಸ್ ವಿಎಸ್ ಪಿ.ಯು.ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 97.5 ಅಂಕ ಗಳಿಸಿ ಪ್ರಥಮ ಸ್ಥಾನ ಪಡೆದ ಚೈತ್ರಾಂಜಲಿ ಮಯ್ಯರಬೈಲು ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.ಇದೇ ವೇಳೆ ಹನುಮಗಿರಿ ಮೇಳದಿಂದ ಯಕ್ಷಗಾನ ಬಯಲಾಟವು ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...