Tuesday, July 15, 2025

 ಶ್ರೀರಾಮ ಪ್ರೌಢಶಾಲೆಯ ಕಲ್ಲಡ್ಕದಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್‌ನಲ್ಲಿ ತಾಂತ್ರಿಕ ತರಬೇತಿ

ಪ್ರೌಢಶಾಲೆಯ 8ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಶ್ರೀರಾಮ ವಿದ್ಯಾಕೇಂದ್ರದ ಅಟಲ್ ಟಿಂಕರಿಂಗ್ ಲ್ಯಾಬ್‌ನ ವತಿಯಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಹಾಗೂ ಮೆಷಿನ್ ಲರ್ನಿಂಗ್‌ನ ಪರಿಚಯ ಮತ್ತು ಕೋಡಿಂಗ್ ತರಬೇತಿಯನ್ನು ನೀಡಲಾಯಿತು.

ಕೋಡಿಂಗ್ ತರಬೇತಿಯಲ್ಲಿ ಟೈಮರ್ ಮತ್ತು ಕ್ಯಾಲ್ಕುಲೇಟರ್ ಅಪ್ಲಿಕೇಶನ್ ಮಾಡುವುದನ್ನು ಕಲಿಸಲಾಯಿತು.  ವಿತ್ವರ ಕಂಪನಿಯ ರತನ್ ಹಾಗೂ ಪುನೀತ್, ಗುರಚೇತನ್ ತರಬೇತಿ ನೀಡಿದರು. ಅಟಲ್ ಟಿಂಕರಿಂಗ್ ಲ್ಯಾಬ್‌ನ ರೋಹಿಣಿ ಮಾತಾಜಿ ಸಂಯೋಜನೆ ಮಾಡಿದರು. ಗಣಕ ಶಿಕ್ಷಕಿ ಕವಿತಾ ಮಾತಾಜಿ ಸಹಕರಿಸಿದರು.

More from the blog

ನೇರಳಕಟ್ಟೆ : ಸರಕಾರಿ ಶಾಲಾ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನೆ..

ಬಂಟ್ವಾಳ : ನೇರಳಕಟ್ಟೆ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಎಂ.ಆರ್.ಪಿ.ಎಲ್ ಸಂಸ್ಥೆಯ ಸಿ.ಎಸ್.ಆರ್. ಅನುದಾನ ಹಾಗೂ ಎನ್.ಎಮ್.ಪಿ.ಎ. ಸಂಸ್ಥೆಯ ಸಿ.ಎಸ್.ಆರ್. ನಿಧಿಯಿಂದ ನಿರ್ಮಾಣವಾದ ನೂತನ ತರಗತಿ ಕೊಠಡಿಗಳ ಹಸ್ತಾಂತರ ಹಾಗೂ ಉದ್ಘಾಟನಾ...

ಬಿ. ಸಿ. ರೋಡ್ ನಲ್ಲಿ ತೆಂಗು ಬೆಳೆ ಮಾಹಿತಿ ಸಂವಾದ

ಬಂಟ್ವಾಳ: ತೆಂಗು ಬೆಳೆಯ ಸೂಕ್ಷ್ಮತೆಯನ್ನು ತಿಳಿದುಕೊಳ್ಳಿ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ತೆಂಗು ಬೆಳೆಗಾರ ಕೊಂಡಾಣ ಚಂದ್ರಶೇಖರ ಗಟ್ಟಿ ಹೇಳಿದರು. ಅವರು ಜು. 15ರಂದು ಬಿ ಸಿ ರೋಡ್ ರಂಗೋಲಿ ಸಭಾಂಗಣದಲ್ಲಿ ತೋಟಗಾರಿಕೆ ಇಲಾಖೆ...

ಅರಣ್ಯ ಗಸ್ತುಪಾಲಕ ಜಿತೇಶ್.ಪಿ.ಗೆ ಮುಖ್ಯಮಂತ್ರಿ ಪದಕ

ಮಂಗಳೂರು:  ಅರಣ್ಯ ಇಲಾಖೆಯ ಬಂಟ್ವಾಳ ವಲಯದ ಗಸ್ತುಪಾಲಕ ಜಿತೇಶ್.ಪಿ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. ಇವರು ಸುಮಾರು 20 ವರ್ಷಗಳಿಂದ ಪಂಜ, ಮಂಗಳೂರು, ಬಂಟ್ವಾಳ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಬಂಟ್ವಾಳ...

ತುಳುರಂಗಭೂಮಿ‌ ಕಲಾವಿದ ಮೌನೇಶ ಆಚಾರ್ಯ ನಿಧನ..

ಬಂಟ್ವಾಳ : ಪ್ರತಿಭಾನ್ವಿತ ಯುವಕ, ತುಳುರಂಗಭೂಮಿ‌ ಕಲಾವಿದ, ಕಾಪಿಕಾಡು‌ ನಿವಾಸಿ ಮೌನೇಶ ಆಚಾರ್ಯ ಮಾಣಿ(44) ಇವರು ಮಂಗಳವಾರ ಮುಂಜಾನೆ ತಮ್ಮ‌ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು. ಚಿನ್ನದ ಕೆಲಸ‌ಮಾಡುತ್ತಿದ್ದ ಇವರು ಜೊತೆಗೆ ಮನೆಸಮೀಪವೇ ಚಿಕ್ಕ‌ ದಿನಸಿ‌ ಅಂಗಡಿ...