Thursday, June 26, 2025

ಕೊರೋನ: ಸಜಿಪನಡು ಗ್ರಾಮದ 10 ತಿಂಗಳ ಮಗು ಆಸ್ಪತ್ರೆಯಿಂದ ಬಿಡುಗಡೆ

ಬಂಟ್ವಾಳ: ಕೋವಿಡ್ – 19 (ಕೊರೋನ) ವೈರಸ್ ಸೋಂಕು ದೃಢಪಟ್ಟು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಜಿಪನಡು ಗ್ರಾಮದ 10 ತಿಂಗಳ ಮಗು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದೆ.
ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಗ್ರಾಮದ ಹತ್ತು ತಿಂಗಳ ಗಂಡು ಮಗುವನ್ನು ಮಾರ್ಚ್ 23ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾರನೆ ದಿನ ಮಗುವಿನ ಗಂಟಲ ಸ್ರಾವವನ್ನು ಕೋವಿಡ್ – 19 ಪರೀಕ್ಷೆಗೆ ಕಳುಹಿಸಿದ್ದು ಮಾರ್ಚ್ 26ರಂದು ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಸೋಂಕು ದೃಢಪಟ್ಟಿದ್ದರೂ ಮಗುವಿನ ಆರೋಗ್ಯ ಸಂಪೂರ್ಣ ಸ್ಥಿರವಾಗಿತ್ತು. ಇಂದು ಸಂಜೆ ಮಗು ಹಾಗೂ ಮಗುವಿನೊಂದಿಗೆ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಮಗುವಿನ ತಾಯಿ, ಅಜ್ಜಿ ಬಿಡುಗಡೆಗೊಂಡಿದ್ದಾರೆ. ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿದ್ದ ಮಗುವಿನ ತಂದೆ, ಅಜ್ಜ, ಚಿಕ್ಕಪ್ಪ ಕೆಲವು ದಿನಗಳ ಹಿಂದೆಯೇ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.
ಮಗುವಿಗೆ ಸೋಂಕು ದೃಢಪಟ್ಟ ಬಳಿಕ ಮಗುವಿನ ತಂದೆ, ತಾಯಿ, ಅಜ್ಜ, ಅಜ್ಜಿ, ಚಿಕ್ಕಪ್ಪ ಸಹಿತ ಮಗು ಇದ್ದ ಮನೆಯ ನೆರೆಮನೆಯವರ ಗಂಟಲ ಸ್ರಾವವನ್ನು ಪರೀಕ್ಷೆಗೆ ಕಳುಹಿಸಿದ್ದು ಎಲ್ಲರದ್ದೂ ನೆಗೆಟಿವ್ ವರದಿ ಬಂದಿತ್ತು.

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...