ಬೆಂಗಳೂರು: ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಿದೆ. ಕೋವಿಡ್ 19 (Covid-19) ಭೀತಿ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಫಲಿತಾಂಶವನ್ನು ಕಾಲೇಜುಗಳಲ್ಲಿ ಪ್ರಕಟಿಸದೆ ಕಾಲೇಜು ಆಡಳಿತ ಮಂಡಳಿಗಳು ವಿದ್ಯಾರ್ಥಿಗಳ ಮೊಬೈಲ್ಗೆ ಸಂದೇಶ ಅಥವಾ ಇಮೇಲ್ ಮೂಲಕ ಫಲಿತಾಂಶದ ವಿವರ ಕಳುಹಿಸುವಂತೆ ಸರ್ಕಾರ ಸೂಚಿಸಿದೆ.


