Tuesday, September 26, 2023

ಅತ್ಯಾಚಾರಕ್ಕೊಳಗಾದ ಯುವತಿಯ ಮನೆಗೆ ಭೇಟಿ, ಸಾಂತ್ವಾನ ನೀಡಿದ ಸಂಸದ ನಳಿನ್

Must read

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಕಳೆದ ಐದಾರು ವರ್ಷಗಳಿಂದ ಗಾಂಜಾ ಮಾಫಿಯಾಗಳು ಸರಕಾರವನ್ನೇ ಕಪಿಮುಷ್ಟಿಯಲ್ಲಿಟ್ಟುಕೊಂಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಸಾಮೂಹಿಕ ಅತ್ಯಾಚಾರ ಇಡೀ ಜಿಲ್ಲೆಯ ಜನ ತಲೆ ತಗ್ಗಿಸುವ ಕೆಲಸ ಮಂಗಳೂರಿನಲ್ಲಿ ನಡೆದಿದೆ. ಈ ಘಟನೆ ಸರಕಾರದ ವೈಫಲ್ಯವನ್ನು ಎತ್ತಿತೋರಿಸುತ್ತದೆ. ಶೀಘ್ರವಾಗಿ ಆರೋಪಿಗಳನ್ನು ಬಂಧಿಸಿದ ಪೋಲೀಸ್ ಇಲಾಖೆಗೆ ಅಭಿನಂದನೆ ಸಲ್ಲಿಸುತ್ತೇನೆ.
ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಪೋಲೀಸ್ ಮುಂದಾಗಬೇಕು.‌ ಘಟನೆಯಿಂದ ನೊಂದಿರುವ ಹುಡುಗಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಬಡಕುಟುಂಬಕ್ಕೆ ಪರಿಹಾರ ನೀಡಬೇಕು, ದೈರ್ಯ ತುಂಬಿ, ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು. ಅತಿವೃಷ್ಟಿಯಿಂದ ನಷ್ಟ ಅನುಭವಿಸಿದ ದ.ಕ.ಜಿಲ್ಲೆ ಹಾಗೂ ಕೊಡಗು ಜಿಲ್ಲೆಗಳಿಗೆ ಕೇಂದ್ರ ಸರಕಾರ 720 ಕೋಟಿ ಮಂಜೂರು ಮಾಡಿದೆ, 541.28 ಕೋಟಿ ಪ್ಯಾಕೇಜ್ ಬಿಡುಗೊಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಮನಾಥ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಎರಡು ಜಿಲ್ಲೆಯ ಜಿಲ್ಲಾಧಿಕಾರಿ ಗಳು ಫಲಾನುಭವಿಗಳಿಗೆ ಶೀಘ್ರವಾಗಿ ಸರಿಯಾದ ರೀತಿಯಲ್ಲಿ ತಲುಪಿಸುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಕೊಲೆರೋಗದಿಂದ ಕಂಗಲಾದ ಅಡಿಕೆ ಬೆಳೆಗಾರರಿಗೆ ರಾಜ್ಯ ಸರಕಾರ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂಧರ್ಭದಲ್ಲಿ ಶಾಸಕ ರಾಜೇಶ್ ನಾಯಕ್, ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಜಿಲ್ಲಾ ಎಸ್.ಸಿ.ಮೋರ್ಚಾ ದ ಅಧ್ಯಕ್ಷ ದಿನೇಶ್ ಅಮ್ಟೂರು, ಜಿ.ಪಂ.ಸದಸ್ಯೆ ಕಮಾಲಾಕ್ಷೀ ಕೆ.ಪೂಜಾರಿ, ಪ್ರಮುಖರಾದ ರಮಾನಾಥ ರಾಯಿ, ಮೋಹನ್ ಪಿ.ಎಸ್.ಮತ್ತಿತರರು ಉಪಸ್ಥಿತರಿದ್ದರು. ‌

More articles

Latest article