Thursday, April 11, 2024

ಮಾಣಿ ನಿವಾಸಿ ದುಬೈಯಲ್ಲಿ ಹೃದಯಘಾತದಿಂದ ನಿಧನ

ವಿಟ್ಲ: ಮಾಣಿ ಸಮೀಪದ ಬುಡೋಳಿ ನಿವಾಸಿಯೋರ್ವರು ದುಬಾಯಿಯಲ್ಲಿ ಹೃದಯಾಘಾತದಿಂದ ಮಂಗಳವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಮೃತರನ್ನು ಬಿ.ಖಾಸಿಂ ಹಾಜಿ ಎಂದು ಹೆಸರಿಸಲಾಗಿದೆ. ಇವರು ತಿಂಗಳ ಹಿಂದೆಯಷ್ಟೇ ದುಬಾಯಿಯಲ್ಲಿರುವ ತನ್ನ ಮಗಳ ಮನೆಗೆ ವಿಸಿಟಿಂಗ್
ವೀಸಾದಲ್ಲಿ ತೆರಳಿದ್ದರು. ಮಂಗಳವಾರ ಬೆಳಿಗ್ಗೆ ಭಾರತೀಯ ಕಾಲಮಾನ 7-00 ಕ್ಕೆ ದುಬಾಯಿ-ಅಲ್ ರಾಶಿದಿಯಾ ದ ಮಗಳ ಮನೆಯಲ್ಲಿ ಹೃದಯಾಘಾತದಿಂದ ಮೃತಪಟ್ಟರು.
ಮೃತ ದೇಹವನ್ನು ಅಲ್ಲಿನ ಶಾರ್ಜಾ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು ಗುರುವಾರ ಮುಂಜಾನೆ 5-30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತಲುಪಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ.
ಸುಲ್ತಾನ್ ಬೀಡಿ ಮಾಲಕ ದಿ.ಹಾಜಿ ಬಿ. ಹುಸೈನ್ ಅವರ ಸಹೋದರರಾಗಿರುವ ಇವರು ಮಾಣಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...