ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬಂಟ್ವಾಳ ತಾಲ್ಲೂಕು ಘಟಕದ ಮಹಾಸಭೆ ಹಾಗೂ ನಿವೃತ್ತ ಸರ್ಕಾರಿ ನೌಕರರಿಗೆ ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಸರಕಾರಿ ನೌಕರರ ಸಭಾಭವನ ಬಿ.ಸಿ.ರೋಡಿನಲ್ಲಿ ನಡೆಯಲಿದೆ.
ನಿವೃತ್ತ ಸರಕಾರಿ ನೌಕರರಿಗೆ ಅಭಿನಂದನೆ, ಸರಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ (SSLC ಹಾಗೂ PUC ಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ), ಕ್ರೀಡಾ ಕ್ಷೇತ್ರದಲ್ಲಿ ಹಾಗೂ ಇನ್ನಿತರ ಕ್ಷೇತ್ರದಲ್ಲಿ ರಾಜ್ಯ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ಸರ್ಕಾರಿ ನೌಕರರಿಗೆ ಹಾಗೂ ನೌಕರರ ಮಕ್ಕಳಿಗೆ ಅಭಿನಂದನೆ ಸಲ್ಲಿಸುವುದು, ತಾಲ್ಲೂಕು ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ.

(ಈ ಮೇಲಿನ ಎಲ್ಲಾ ಮಾಹಿತಿಗಳನ್ನು ಡಿ.7 ರ ಒಳಗೆ ನೀಡುವುದು contact no 9448726650 or 8861938727)

ಎಲ್ಲ ನೌಕರ ಬಂಧುಗಳು ಈ ಕಾರ್ಯಕ್ರಮದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರು ಉಮಾನಾಥ ರೈ ಮೇರಾವು, ಹಾಗೂ ಸರಕಾರಿ ನೌಕರರ ಸಂಘ ಹಾಗೂ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here