Wednesday, October 18, 2023

ದ. ಕ. ಅಸಂಘಟಿತ ಕಾರ್ಮಿಕರ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ ಬಿ.ಎಂ ಅಬ್ಬಾಸ್ ಆಲಿ ನೇಮಕ

Must read

ಬಂಟ್ವಾಳ: ಮಾಜಿ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ, ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯ ಅಧ್ಯಕ್ಷರು ಹಾಗೂ ವಿಧಾನಪರಿಷತ್ತಿನ ಶಾಸಕರಾದ ಕೆ.ಹರೀಶ್ ಕುಮಾರ್ ರವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಅಸಂಘಟಿತ ಕಾರ್ಮಿಕರ ಕಾಂಗ್ರೇಸ್ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ| ಶಾಂತವೀರ ನಾಯ್ಕರವರು ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ ಬಿ.ಎಂ ಅಬ್ಬಾಸ್ ಆಲಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.
ಇಂಜಿನಿಯರಿಂಗ್ ಪದವೀಧರರಾಗಿರುವ ಬಿ.ಎಂ ಅಬ್ಬಾಸ್ ಆಲಿ ಅವರು ಎನ್.ಎಸ್.ಯು.ಐ ಯುವ ಕಾಂಗ್ರೇಸ್ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ.

More articles

Latest article