Sunday, April 7, 2024

ಬ್ಯಾರಿ ನಿಖಾಹ್ ಹೆಲ್ಪ್‌ಲೈನ್‌ನ ಕಾರ್ಯ ಶ್ಲಾಘನೀಯ: ರಿಯಾಝ್ ಫರಂಗಿಪೇಟೆ

ಬಂಟ್ವಾಳ: ಬ್ಯಾರಿ ನಿಖಾಹ್ ಹೆಲ್ಪ್‌ಲೈನ್ ಇದರ ಕಾರ್ಯಸೂಚಿ ಹಾಗೂ ಮಾಹಿತಿಯನ್ನೊಳಗೊಂಡ ಕರಪತ್ರ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ ಸುಲ್ತಾನ್ ಕಾಂಪ್ಲೆಕ್ಸ್‌ನಲ್ಲಿ ಬುಧವಾರ ಸಂಜೆ ನಡೆಯಿತು. ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಅವರು ಕರಪತ್ರವನ್ನು ಬಿಡುಗಡೆಗೊಳಿಸಿ ಮಾತನಾಡಿ, ಬಡ ಯುವಕ-ಯುವತಿಯರ ಸುಂದರ ವೈವಾಹಿಕ ಜೀವನಕ್ಕೆ ಆಸರೆಯಾಗಿರುವ ಬ್ಯಾರಿ ನಿಖಾಹ್ ಹೆಲ್ಪ್‌ಲೈನ್‌ನ ಕಾರ್ಯ ಶ್ಲಾಘನೀಯ. ಯವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಸುಮಾರು 285 ನವ ವಧುವಿಗೆ ಹಾಗೂ 56 ವಿಚ್ಛೇಧಿತ ವಧುವಿಗೆ ವೈವಾಹಿಕ ಸಂಬಂಧವನ್ನು ಕಲ್ಪಿಸಿರುವುದು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಪ್ರಚಾರ ಹಾಗೂ ಆಡಂಬರಗಳಿಲ್ಲದ ತಂಡದ ಕಾರ್ಯ ಸಮಾಜದಲ್ಲಿ ಇನ್ನಷ್ಟು ಯಶಸ್ವಿಯಾಗಲಿ. ಇದಕ್ಕೆ ಪ್ರತಿಯೊಂದು ಜಮಾಅತ್ ಕೈಜೋಡಿಬೇಕಾಗಿದೆ ಎಂದರು.

ಕ್ಲೋತ್ ಬಾಕ್ಸ್ ಅಳವಡಿಕೆ, ರಂಜಾನ್ ಕಿಟ್ ವಿತರಣೆ, ರೋಗಿಗಳಿಗೆ ಆಹಾರ ಹಾಗೂ ಉಡುಪುಗಳ ವಿತರಣೆ, ವೈವಾಹಿಕ ಸಂಬಂಧ, ನೆರೆ ಸಂತ್ರಸ್ತರಿಗೆ ವಸ್ತ್ರ ವಿತರಣೆ, ವಸತಿ ಶಾಲೆಯ ಮಕ್ಕಳಿಗೆ ಇಫ್ತಾರ್ ಕೂಟ ಹೀಗೆ ಅನೇಕ ಸಮಾಜಮುಖಿ ಕಾರ್ಯಗಳಲ್ಲಿ ಬ್ಯಾರಿ ನಿಖಾಹ್ ಹೆಲ್ಪ್ ತೊಡಗಿಕೊಂಡಿರುವುದು ಪುಣ್ಯದ ಕಾರ್ಯವಾಗಿದೆ ಎಂದು ಹೇಳಿದರು.ಹನೀಫ್ ಮುಸ್ಲಿಯಾರ್ ಪರ್ಲಿಯಾ ದುಆಃ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಬ್ಯಾರಿ ನಿಖಾಹ್ ಹೆಲ್ಪ್‌ಲೈನ್‌ನ ಪ್ರಧಾನ ಕಾರ್ಯದರ್ಶಿ ಮಜೀದ್ ಬಿಕರ್ನಕಟ್ಟೆ ಅಧ್ಯಕ್ಷತೆ ವಹಿಸಿ, ಸಂಘದ ಮುಂದಿನ ಯೋಜನೆಗಳನ್ನು ಹಾಗೂ ಕಾರ್ಯಸೂಚಿಯ ಬಗ್ಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಮುಸ್ಲಿಂ ಸಮಾಜ ಬಂಟ್ವಾಳ ಇದರ ಅಧ್ಯಕ್ಷ ಇಬ್ನು ಅಬ್ಬಾಸ್, ಉದ್ಯಮಿ ಹೈದರ್ ಎಸ್.ಎಚ್. ಉಪಸ್ಥಿತರಿದ್ದರು. ಬ್ಯಾರಿ ನಿಖಾಹ್ ಹೆಲ್ಪ್‌ಲೈನ್ ಸದಸ್ಯ ರಹಿಮಾನ್ ಮಠ ನಿರೂಪಿಸಿದರು.More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...