Wednesday, April 10, 2024

ಅಳಿಕೆ: ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ

ವಿಟ್ಲ: ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಸಮಾರಂಭ ನಡೆಯಿತು.
ಸುಮಾರು 40 ವರ್ಷಗಳಷ್ಟು ಅಧ್ಯಾಪಕ ವೃತ್ತಿಯಲ್ಲಿ ತೊಡಗಿಸಿಕೊಂಡು 10 ವರ್ಷಗಳ ಕಾಲ ಈ ಶಾಲೆಯಲ್ಲಿ ಸೇವೆಗೈದ ಎಂ. ಗೋಪಾಲಕೃಷ್ಣ ಭಟ್ ಅವರನ್ನು ಸನ್ಮಾನಿಸಲಾಯಿತು. ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್, ಶಾಲಾಭಿವೃದ್ದಿ ಸಮಿತಿ, ಶಿಕ್ಷಕ ವೃಂದ ಮತ್ತು ಮಕ್ಕಳ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಯು. ಗಂಗಾಧರ ಭಟ್‌ರವರು ಸನ್ಮಾನಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾದ ಭಾರತ ಸೇವಾಶ್ರಮ ಕನ್ಯಾನ ಇದರ ಕಾರ್‍ಯದರ್ಶಿ ಯಸ್. ಈಶ್ವರ ಭಟ್‌ರವರು ಯಾವುದೇ ಪ್ರಶಸ್ತಿಗಿಂತಲೂ ಶಿಷ್ಯ ವೃಂದ ಗುರುಗಳ ಮೇಲೆ ಇಟ್ಟ ಪ್ರೀತಿಯೇ ಶ್ರೇಷ್ಠ ಪ್ರಶಸ್ತಿ ಎಂದರು.
ಸಭೆಯಲ್ಲಿ ಕಾನ ಈಶ್ವರ ಭಟ್ ಹಾಗೂ ವಿಟ್ಲ ವಲಯದ ಶಿಕ್ಷಣ ಸಂಯೋಜಕಿಯಾದ ಪುಷ್ಪಾ ಭಾಗವಹಿಸಿದ್ದರು. ಶಿಕ್ಷಕರಾದ ವೇಣುಗೋಪಾಲ ಶೆಟ್ಟಿಯವರು ಸನ್ಮಾನಿತರ ಬಗ್ಗೆ ಅಭಿನಂದನಾ ಭಾಷಣ ಮಾಡಿದರು. ಸಂಸ್ಥೆಯ ಆಡಳಿತಾಧಿಕಾರಿ ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಎಸ್. ಜನಾರ್ದನ ನಾಯಕ್ ಸನ್ಮಾನ ಪತ್ರ ವಾಚಿಸಿದರು. ಸಂಚಾಲಕರಾದ ಕೆ.ಯಸ್. ಕೃಷ್ಣ ಭಟ್, ಕಾರ್‍ಯದರ್ಶಿಗಳಾದ ಎಸ್. ಚಂದ್ರಶೇಖರ ಭಟ್ ಉಪಸ್ಥಿತರಿದ್ದರು.
ನಿವೃತ್ತ ಮುಖ್ಯ ಶಿಕ್ಷಕರಾದ ಯಂ. ರುಕ್ಮಯ್ಯ ಗೌಡ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಈಶ್ವರ ನಾಯ್ಕ್ ಎಸ್. ರವರು ಶಾಲಾ ವರದಿ ವಾಚಿಸಿ, ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ರಾಜೇಂದ್ರ ರೈ. ಕಾರ್‍ಯಕ್ರಮ ನಿರೂಪಿಸಿದರು. ಮಧ್ಯಾಹ್ನ ಭೋಜನದ ಬಳಿಕ ಗೋಪಾಲಕೃಷ್ಣ ಭಟ್ ನಿರ್ದೇಶಿಸಿದ ಮಾಯಾವಿ ಇಂದ್ರಾರಿ ಎಂಬ ಯಕ್ಷಗಾನ ಮಕ್ಕಳಿಂದ ಪ್ರದರ್ಶಿಸಲ್ಪಟ್ಟಿತು.

More from the blog

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...