Monday, April 8, 2024

ಬಿಸಿರೋಡಿನ ಅಯ್ಯಪ್ಪ ವ್ರತದಾರಿಗಳಿಂದ ತ್ರಿಶೂರ್ ದೇವಾಲಯ ದಲ್ಲಿ ಸ್ವಚ್ಚತಾ ಕಾರ್ಯ

ಬಂಟ್ವಾಳ: ಬಿಸಿರೋಡಿನ ಅಯ್ಯಪ್ಪ ವ್ರತದಾರಿಗಳಿಂದ ತ್ರಿಶೂರ್ ದೇವಾಲಯ ದಲ್ಲಿ ಸ್ವಚ್ಚತಾ ಕಾರ್ಯಕ್ರಮದ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ .‌
ಬಂಟ್ವಾಳ ತಾಲೂಕಿನ ಸುಮಾರು 70 ಅಯ್ಯಪ್ಪ ವ್ರತದಾರಿಗಳು ಈ ಸ್ವಚ್ಚತಾ ಕಾರ್ಯಕ್ರಮ ದಲ್ಲಿ ಭಾಗಿಯಾಗಿದ್ದರು.
ಬಿಸಿರೋಡಿನ ಪೋಲೀಸ್ ಲೈನ್  ಶ್ರೀ ಅನ್ನಪೂರ್ಣೇಶ್ವರಿ ನಾಗದೇವರ ಸನ್ನಿದಾನದಿಂದ ರಮಾನಂದ ಗುರುಸ್ವಾಮಿ ಅವರ ನೇತ್ರತ್ವದಲ್ಲಿ 70  ಮಂದಿ ಅಯ್ಯಪ್ಪ ಮಾಲಾಧಾರಿಗಳು ಜ.10 ಶಬರಿಮಲೆ ಅಯ್ಯಪ್ಪ ಬೆಟ್ಟಕ್ಕೆ ತೆರಳಿದ್ದರು.
ಇಂದು ಇವರು ಶಬರಿಮಲೆ ಯಾತ್ರೆ ಮುಗಿಸಿ ವಾಪಾಸುಗುವ ವೇಳೆ ತ್ರಿಶೂರ್ ಈಶ್ವರ ದೇವಾಲಯ ಕ್ಕೆ ಬೇಟಿ ನೀಡಿ ದೀಪಾರಾಧನೆ ಸೇವೆ ಮಾಡಿದ ಬಳಿಕ ಸುಮಾರು 2 ಗಂಟೆಯಿಂದ 5.30 ಗಂಟೆಯವರೆಗೆ ಈ ದೇವಾಲಯದ ಸುತ್ತ ಸ್ವಚ್ಚತಾ ಕಾರ್ಯ ನಡೆಸಿ ದೇವರ ಸೇವೆ ಮಾಡಿ ಇತರರಿಗೆ ಮಾದರಿಯಾದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...