Thursday, April 11, 2024

ಗ್ಯಾಸ್ ಏಜೆನ್ಸಿ ಅಂಗಡಿಯಿಂದ ಲಕ್ಷಾಂತರ ರೂ. ನಗದು ಕಳವು

ಬಂಟ್ವಾಳ: ಮಾರಿಪಳ್ಳ ಗ್ಯಾಸ್ ಏಜೆನ್ಸಿ ಯ ಅಂಗಡಿಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂ ನಗದು ಹಣವನ್ನು ದೊಚಿದ ಘಟನೆ ಶುಕ್ರವಾರ ಮುಂಜಾನೆ ವೇಳೆ ನಡೆದಿದೆ.
ಬಂಟ್ವಾಳ ತಾಲೂಕಿನ ಕಡೆಗೋಳಿ ಸಮೀಪದ ಮಾರಿಪಳ್ಳದಲ್ಲಿರುವ ಪುಷ್ಪರಾಜ ಚೌಟ ಅವರ ಮಾಲೀಕತ್ವದ ಚೌಟ ಕಾಂಪ್ಲೆಕ್ಸ್ ನಲ್ಲಿರುವ ಚೌಟ ಇಂಡೆನ್ ಗ್ಯಾಸ್ ಏಜೆನ್ಸಿ ಅಂಗಡಿಗೆ ನುಗ್ಗಿದ ಕಳ್ಳರು ಕ್ಯಾ ಸ್ ಕೌಂಟರ್ ನಲ್ಲಿದ್ದ ಸುಮಾರು 2 ಲಕ್ಷ ಕ್ಕೂ ಅಧಿಕ ನಗದು ಮೊತ್ತ ವನ್ನು ಕಳವುಗೈದಿದ್ದಾರೆ.


ಸ್ಥಳಕ್ಕೆ ಶ್ವಾನಧಳ, ಬೆರಳಚ್ಚು ತಜ್ಞರು ಆಗಮಿಸಿ ತನಿಖೆ ನಡೆಸಲಾಗುತ್ತಿದೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದಂತೆ ಸ್ಥಳಕ್ಕೆ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ಬಂಟ್ವಾಳ ಎಸ್‌.ಐ ಪ್ರಸನ್ನ, ಸಿಬ್ಬಂದಿ ಗಳಾದ ಸುರೇಶ್, ಜನಾರ್ಧನ, ವರ್ಗೀಸ್ ಮತ್ತಿತರರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಗಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...