Wednesday, October 25, 2023

ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನಲ್ಲಿ ಜ.19ರಂದು ವಾಣಿಜ್ಯ ಫೆಸ್ಟ್

Must read

ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದ ಕಲಾ, ವಾಣಿಜ್ಯ, ವಿಜ್ಞಾನ ಸಂಘ ಆಯೋಜಿಸಿದ ಕಾಲೇಜು ಮಟ್ಟದ ಒಂದು ದಿನದ Vidhathri 19th Uni Fest” ಜ.19 ಶನಿವಾರದಂದು ಬೆಳಗ್ಗೆ 9ಕ್ಕೆ ಸಾಧನಾ ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಂಗಳೂರಿನ ಸಿವಿಲ್ ಇಂಜಿನಿಯರ್ ರಾಂಪ್ರಸಾದ್ ಕೊಂಬಿಲ ಉದ್ಘಾಟಿಸಲಿದ್ದಾರೆ. ಶ್ರೀರಾಮ ಪದವಿ ಪ್ರಾಚಾರ್ಯ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾರೋಪ ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರಾದ  ವಸಂತ ಮಾಧವ ಉಪಸ್ಥಿತರಿರುತ್ತಾರೆ. ಮುಖ್ಯ ಅತಿಥಿಯಾಗಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ವಾಣಿಜ್ಯ ಉಪನ್ಯಾಸಕಿ  ಸೌಮ್ಯಶ್ರೀ, ರಾಜೇಶ್ ನರಿಂಗಾನ ಆಗಮಿಸಲಿದ್ದಾರೆ. ಮಂಗಳೂರಿನ ಸಂತ ಆಗ್ನೇಸ್ ಕಾಲೇಜಿನ ವಾಣಿಜ್ಯ ಉಪನ್ಯಾಸಕ ವಿಷ್ಣು ಪೂಜಾರಿ, ವಾಮದಪದವು ಸ್ನಾತಕೋತ್ತರ ವಿಭಾಗ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ಉಪನ್ಯಾಸಕಿ ಕುಮಾರಿ ನಮಿತಾ, ಬಿ.ಸಿ.ರೋಡಿನ ನ್ಯಾಯವಾದಿ ಶಿವಗಿರಿ ಸತೀಶ್ ಭಟ್, ಶ್ರೀರಾಮ ಪದವಿಪೂರ್ವ ವಿಭಾಗದ ಪ್ರಾಂಶುಪಾಲ ವಸಂತ ಬಲ್ಲಾಳ್ ಉಪಸ್ಥಿತರಿರುವರು ಎಂದು ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

More articles

Latest article