Tuesday, April 9, 2024

ಕಕ್ಯಪದವು ಶ್ರೀ ಬ್ರಹ್ಮಬದರ್ಕಳ ಕ್ಷೇತ್ರ ಫೆ.1: ನೂತನ ಕೊಡಿಮರ ಸಾಗಾಟ ಮೆರವಣಿಗೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವೆಂದು ಪ್ರಸಿದ್ಧಿ ಪಡೆದಿರುವ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬದರ್ಕಳ ಗರಡಿ ಕ್ಷೇತ್ರವು ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಕ್ಷೇತ್ರಕ್ಕೆ ನೂತನ ಧ್ವಜಸ್ಥಂಭದ ಸಾಗಾಟ ಕಾರ್ಯಕ್ರಮ ಫೆ.1ರಂದು ಜರಗಲಿದೆ.
ಕ್ಷೇತ್ರದ ಗರ್ಭಗುಡಿಂiಷ್ಟೇ ಪ್ರಾಮುಖ್ಯತೆ ಹೊಂದಿರುವ ನಿಟ್ಟಿನಲ್ಲಿ ವೈದಿಕರ ಮಾರ್ಗದರ್ಶನದಂತೆ ನೂತನ ಧ್ವಜಸ್ಥಂಭ ಸ್ಥಾಪನೆಗೊಳ್ಳಲಿದ್ದು, ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಪಟ್ಟದಬಲುವಿನಿಂದ ಕೊಡಿಮರ ಆಗಮಿಸಲಿದೆ. ಬೆಳಗ್ಗೆ ಕೊಡಿಮರಕ್ಕೆ ವೃಕ್ಷ ಮುಹೂರ್ತ ನಡೆಯಲಿದ್ದು ಬಳಿಕ ಲಿಂಗಸ್ಥಳ, ಕರ್ಲಬೀಡು, ತಾಳಿಪಡ್ಪು ರಸ್ತೆಯಾಗಿ ಶ್ರೀ ಪಂಚದುರ್ಗಾ ಪರಮೇಶ್ವರಿಪ್ರೌಢಶಾಲಾ ಬಳಿಯಿಂದ ವಿವಿಧ ವಾಹನ, ಚೆಂಡೆ,ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ವಿಜೃಂಭಣೆಯಿಂದ ಶ್ರೀ ಕ್ಷೇತ್ರಕ್ಕೆ ಸಾಗಾಟ ನಡೆಯಲಿದೆ ಎಂದು ಕ್ಷೇತ್ರದ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

More from the blog

ಬಿಜೆಪಿ ಬಂಟ್ವಾಳ ಮಂಡಲದ ವತಿಯಿಂದ ನಾರಿಶಕ್ತಿ ಮಹಿಳಾ ಸಮಾವೇಶ

ಬಂಟ್ವಾಳ: ನಾರಿ ಶಕ್ತಿ ಸಶಕ್ತರಾಗಬೇಕು ಎಂಬುದು ಮಹತ್ವದ ಕನಸು ಮತ್ತು ಪರಿಕಲ್ಪನೆಯಾಗಿದ್ದು, ರಾಜಕೀಯವಾಗಿ ಮಹಿಳೆಯರನ್ನು ಸಬಲೀಕರಣ ಮಾಡಿದ ಪಕ್ಷ ಬಿಜೆಪಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರದ...

ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ, ಮನೆ, ಮನ ಅಭಿಯಾನ ಸಂಪರ್ಕಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ದ.ಕ.ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಬೇಕು ಎಂಬ ಯೋಚನೆಯಿಂದ ಶಾಸಕ ರಾಜೇಶ್ ನಾಯ್ಕ್ ಅವರು ವಿಕಸಿತ ಭಾರತ ಸಂಕಲ್ಪದೊಂದಿಗೆ ಗ್ರಾಮ ,ಮನೆ,...

ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಗ್ರಾಮದೈವ ಶ್ರೀ ಗಿಳಿಕಿಂಜತಾಯಿ ದೇವಸ್ಥಾನದ ವರ್ಷವದಿ ಜಾತ್ರೆಯು ಊರ ಪರವೂರ ಭಕ್ತದಿಗಳ ಸೇರಿಗೆಯಲ್ಲಿ ವಿಜೃಂಭಣೆಯಿಂದ ಜರಗಿತು. ದಿನಾಂಕ 7-4-2024 ರ ರಾತ್ರಿ ಗಿಳಿಕಿಂಜ ಬಂಡಾರ ಮನೆಯಿಂದ ದೈವದ ಬಂಡಾರ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...