ಬಂಟ್ವಾಳ: ಮಡಂತ್ಯಾರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಜ. 25ರಂದು ಸೇಕ್ರೇಡ್ ಹಾರ್ಟ್ ಕಾಲೇಜಿನಲ್ಲಿ ಆಚರಿಸಲಾಯಿತು. NSS ಯೋಜನಾಧಿಕಾರಿ ಜನಾರ್ದನ ನಾಯರ್ ಅವರು ಎಲ್ಲರನ್ನು ಸ್ವಾಗತಿಸಿ ರಾಷ್ಟ್ರೀಯ ಮತದಾರರ ದಿನಾಚರಣೆ ಬಗ್ಗೆ ಪ್ರಾಸ್ತಾವಿಕ ಮಾತನ್ನಾಡಿದರು.

ಗ್ರಾ.ಪಂ. ಪಿಡಿಒ ನಾಗೇಶ್ ಎಂ ರಾಷ್ಟ್ರೀಯ ಮತದಾರರ ದಿನಾಚರಣೆಯ ಮಹತ್ವ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ಮತದಾರರ ಪಾತ್ರದ ಬಗ್ಗೆ ತಿಳಿಹೇಳಿದರು. ಪಾಚಾರ್ಯರಾದ ಅಲೆಕ್ಸ್ ಐವನ್ ಸಿಕ್ವೇರಾ ಅವರು ಪ್ರತಿಜ್ಞಾ ವಿಧಿ ಬೋದಿಸಿ, ಹೊಸದಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾದ ಇಬ್ಬರು ಕಾಲೇಜು ವಿದ್ಯಾರ್ಥಿನಿಯರಿಗೆ ಮತದಾರರ ಗುರುತಿನ ಚೀಟಿ ವಿತರಿಸಿದರು. ಕಾಲೇಜಿನ ಪ್ರಾಧ್ಯಾಪಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಗ್ರಾ.ಪಂ. ಸಿಬ್ಬಂದಿ ಉಮೇಶ್ ಸಹಕರಿಸಿದರು. ರಾಷ್ಟ್ರಗೀತೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯ ಗೊಳಿಸಲಾಯಿತು