Thursday, April 11, 2024

ಫೆ.2ರಂದು ನವೋದಯ ಯುವಕ ಸಂಘದ ವತಿಯಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

ಬಂಟ್ವಾಳ: ನವೋದಯ ಯುವಕ ಸಂಘ (ರಿ) ಮೈರಾನ್ ಪಾದೆ, ಕಾಮಾಜೆ ಬಂಟ್ವಾಳ ಇದರ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ದಿನಾಂಕ ಫೆ.2ರ ಶನಿವಾರ ನವೋದಯ ರಂಗಮಂದಿರ, ಮೈರಾನ್ ಪಾದೆ, ಕಾಮಾಜೆಯಲ್ಲಿ ನಡೆಯಲಿದೆ. ಫೆ.2ರಂದು  ಶನಿವಾರ ಬೆಳಿಗ್ಗೆ 6 ಗಂಟೆಗೆ ಗಣಹೋಮ, 8 ಗಂಟೆಗೆ  ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ, 12.30ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಸಂಜೆ 5 ಗಂಟೆಗೆ ಅಂಗನವಾಡಿ ಮಕ್ಕಳಿಂದ ವಿವಿಧ ವಿನೋದಾವಳಿಗಳು. ನಂತರ ಸಂಘದ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ. ಸಂಜೆ 6.30 ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ 10.30ಕ್ಕೆ ಶಾರದಾ ಕಲಾವಿದರು ಮಂಜೇಶ್ವರ(ರಿ.) ಇದರ ಸದಸ್ಯರಿಂದ ಗಡಿನಾಡ ಕಲಾನಿಧಿ  ಕೃಷ್ಣ  ಜಿ. ಮಂಜೇಶ್ವರ ಸಾರಥ್ಯದ ತುಳುನಾಡ ಕಲಾಬಿರ್ಸೆ, ದೀಪಕ್ ರೈ ಪಾಣಾಜೆ  ಅಭಿನಯದ ಇತ್ತ್ ನಾತ್ ದಿನ ತುಳು ಹಾಸ್ಯ ನಾಟಕ ನಡೆಯಲಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...