ಬಂಟ್ವಾಳ: ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ ಇಲ್ಲಿ ಜ. 11ನೇ ಶುಕ್ರವಾರದಂದು ಮಧ್ಯಾಹ್ನ 2 ಗಂಟೆಗೆ ಸಾಧನಾ ಸಭಾಭವನದಲ್ಲಿ ಮಿಲಿಟರಿ ಪಾರಿತೋಷಕ ಮತ್ತು ಪದಕಗಳ ಪ್ರದರ್ಶಿನಿ ಹಾಗೂ ಸಂವಾದ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಲ್ ಎಮ್. ರಾಜ್ ಮನ್ನಾರ್ Director of army recruitment officer, Kulur Mangalore ಉದ್ಘಾಟಿಸಲಿದ್ದಾರೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ| ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ, ಭಾರತೀಯ ಭೂಸೇನೆಯಲ್ಲಿ ಕ್ಯಾಪ್ಟನ್ ಆಗಿರುವ ಪರ್ಲ್ ಫೆರ್ನಾಂಡಿಸ್, ಸೇನಾ ನಿವೃತ್ತ ಕ್ಯಾಪ್ಟನ್ ಡಾ| ಕೆ.ಜಿ. ಶೆಣೈ, ಶ್ರೀರಾಮ ಮಿಲಿಟರಿ ಮಾರ್ಗದರ್ಶನ ಫಟಕದ ನಿರ್ದೇಶಕ ಶ್ರೀಪ್ರಕಾಶ್ ಕುಕ್ಕಿಲ ಉಪಸ್ಥಿತರಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here