Wednesday, April 17, 2024

ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ವಿಜ್ ಸ್ಪರ್ಧೆ-ಸಿದ್ಧಾಂತ್ ಕಾರ್ಯಕ್ರಮದ ಸಮಾರೋಪ ಸಮಾರಂಭ

ಬಂಟ್ವಾಳ: ಸ್ಪರ್ಧೆಯಲ್ಲಿ ಭಾಗವಹಿಸುವುದು ಮುಖ್ಯ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸಮಾಜದಲ್ಲಿ ಮೇಲು ಕೀಳು ಎನ್ನುವ ಮನೋಭಾವವಿಲ್ಲದೇ ನೈತಿಕ ಗುಣವನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು. ಬದುಕಿನಲ್ಲಿ ಸಿಗುವಂತಹ ಅವಕಾಶವನ್ನು ಸದುಪಯೋಗ ಮಾಡಿಕೊಂಡಾಗ ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಯಾಗಿ ಬೆಳೆಯಲು ಸಾಧ್ಯ ಎಂದು ಬಂಟ್ವಾಳ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಮತ್ತು ಹಳೆವಿದ್ಯಾರ್ಥಿ ಸುದರ್ಶನ್ ಜೈನ್ ಹೇಳಿದರು.
ಅವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಕಾಲೇಜು ನಡೆಸಿದ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಅಂತರ್ ಶಾಲೆ ಕ್ವಿಜ್ ಸ್ಪರ್ಧೆ-ಸಿದ್ಧಾಂತ್ ಕಾರ್‍ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಬಂಟ್ವಾಳ ಎಸ್.ವಿ.ಎಸ್ ಕಾಲೇಜು ಪ್ರಾಂಶುಪಾಲ ಡಾ| ಪಾಂಡುರಂಗ ನಾಯಕ್ ಅಧ್ಯಕ್ಷತೆ ವಹಿಸಿದರು.
ಕಾರ್‍ಯಕ್ರಮದಲ್ಲಿ ಬಂಟ್ವಾಳ ತಾಲೂಕಿನ ಸುಮಾರು 30 ಪ್ರೌಢಶಾಲೆಗಳಲ್ಲಿ ಆಯ್ಕೆ ಮಾಡಿದ ವಿದ್ಯಾರ್ಥಿಗಳ ತಂಡಗಳು ಪಾಲ್ಗೊಂಡಿತು. ಬಂಟ್ವಾಳ ವಿದ್ಯಾಗಿರಿ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆ ವಿದ್ಯಾರ್ಥಿ ತರುಣ್ ಪಿ. ಹೊಳ್ಳ ಮತ್ತು ಸೂರಜ್ ಎಸ್. ತಂಡ ವಿನ್ನರ್‍ಸ್ ಹಾಗೂ ಕಲ್ಲಡ್ಕ ಶ್ರೀ ರಾಮ ಪ್ರೌಢಶಾಲೆ ವಿದ್ಯಾರ್ಥಿ ರಮೇಶ ಮತ್ತು ವೀರೇಶ್ ತಂಡ ರನ್ನರ್‍ಸ್ ಆಫ್ ಪ್ರಶಸ್ತಿಯನ್ನು ಪಡೆದುಕೊಂಡರು.
ಸಹಸಂಯೋಜಕ ಮತ್ತು ಅರ್ಥಶಾಸ್ತ್ರ ಉಪನ್ಯಾಸಕ ಪ್ರದೀಪ್ ಪೂಜಾರಿ ಅತಿಥಿ ಉಪಸ್ಥಿತರಿದ್ದರು.
ಸಿದ್ಧಾಂತ್ ಕಾರ್ಯಕ್ರಮ ಸಂಯೋಜಕಿ ಮತ್ತು ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥೆ ಅಖಿಲಾ ಪೈ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿ ಸಂಯೋಜಕಿ ತೇಜಸ್ವಿ ಸ್ವಾಗತಿಸಿದರು. ವಿದ್ಯಾರ್ಥಿ ಸಂಯೋಜಕ ಚೇತನ್ ಎಸ್. ವಂದಿಸಿ, ತೃತೀಯ ಬಿಕಾಂ ವಿದ್ಯಾರ್ಥಿನಿ ಕೃತಿ ಕಾರ್‍ಯಕ್ರಮ ನಿರೂಪಿಸಿದರು.

More from the blog

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...

ಪುಣಚ: ಸೇತುವೆ ಕುಸಿತ ಪ್ರಕರಣ : ಗುತ್ತಿಗೆದಾರರ ವಿರುದ್ದ ಪ್ರಕರಣ

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ...

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ

ಕನ್ನಡದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರು ನಿಧನರಾಗಿದ್ದಾರೆ. 81 ವರ್ಷದ ದ್ವಾರಕೀಶ್ ಅವರು, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇವರು1942 ಆಗಸ್ಟ್ 19ರಂದು ಮೈಸೂರು...