Thursday, September 28, 2023

ಫೆ.3: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Must read

ಪುಂಜಾಲಕಟ್ಟೆ : ಇಲ್ಲಿನ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ವತಿಯಿಂದ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಫೆ.10ರಂದು ನಡೆಯಲಿರುವ 11ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ ನಿಶ್ಚಿತಾರ್ಥ ಕಾರ್ಯಕ್ರಮ ಫೆ.3ರಂದು ಪುಂಜಾಲಕಟ್ಟೆ ನಂದಗೋಕುಲ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಜರಗಲಿದೆ.
ಈ ಬಾರಿ ಒಟ್ಟು 11 ಜೋಡಿಗಳಿಗೆ ವಿವಾಹ ನಡೆಯಲಿದ್ದು, ತುಳುನಾಡಿನ ಸಂಪ್ರದಾಯ ಪ್ರಕಾರ ನಿಶ್ಚಿತಾರ್ಥ ನಡೆಯಲಿದೆ. ಈ ಸಂದರ್ಭದಲ್ಲಿ ಭಾವೀ ವಧು-ವರರಿಗೆ ಮಂಗಳವಸ್ತ್ರವನ್ನು ವಿತರಿಸಲಾಗುವುದು. ತಾ.ಪಂ. ಸದಸ್ಯ ರಮೇಶ್ ಪೂಜಾರಿ ಕುಡ್ಮೇರು ಅವರು ಅಧ್ಯಕ್ಷತೆ ವಹಿಸುವರು. ಮಡಂತ್ಯಾರು ಉದ್ಯಮಿ ಪ್ರಶಾಂತ್ ಶೆಟ್ಟಿ ಮೂಡಾಯೂರು, ಇಂಜಿನೀಯರ್ ಸಂದೀಪ್ ಆಚಾರ್ಯ, ಪುಂಜಾಲಕಟ್ಟೆ ಅಟೊರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ಸುಧಾಕರ ಶಣೈ ಖಂಡಿಗ, ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.

More articles

Latest article