Thursday, April 11, 2024

ಜ.3ರಂದು ಕೊಳಕೆಯಲ್ಲಿ ತಾಜುಲ್ ಉಲಮಾ ಆಂಡ್ ನೇರ್ಚೆ ಹಾಗೂ ಬುರ್‍ದಾ ಮಜ್ಲಿಸ್

ಬಂಟ್ವಾಳ : ಕೊಳಕೆ ಮುಹಿಯುದ್ದೀನ್ ಜುಮಾ ಮಸೀದಿ ಅಧೀನದಲ್ಲಿರುವ ಹಿದಾಯತುಲ್ ಇಸ್ಲಾಂ ಮದ್ರಸ ಹಾಗೂ ಎಸ್.ಬಿ.ಎಸ್. ಕೊಳಕೆ ಇದರ ವತಿಯಿಂದ ತಾಜುಲ್ ಉಲಮಾ ಸಯ್ಯಿದ್ ಉಳ್ಳಾಲ ತಂಙಳ್ ಅವರ 5ನೇ ಆಂಡ್ ನೇರ್ಚೆ ಹಾಗೂ ಬುರ್‍ದಾ ಮಜ್ಲಿಸ್ ಕಾರ್ಯಕ್ರಮ ಜನವರಿ 3 ರಂದು ಸಂಜೆ ಕೊಳಕೆ ಜುಮಾ ಮಸೀದಿಯಲ್ಲಿ ನಡೆಯಲಿದೆ. 
    ಸಯ್ಯಿದ್ ಮುಶ್ತಾಕುರ್ರಹ್ಮಾನ್ ತಂಙಳ್ ಚಟ್ಟೆಕ್ಕಲ್ ಕಾರ್ಯಕ್ರಮ ಉದ್ಘಾಟಿಸಿ ದುವಾಶಿರ್ವಚನಗೈಯುವರು. ಕೊಳಕೆ ಮಸೀದಿ ಮುದರ್ರಿಸ್ ಬದ್ರುದ್ದೀನ್ ಅಹ್ಸನಿ ಅಳಕೆ ಅಧ್ಯಕ್ಷತೆ ವಹಿಸುವರು. ಹಾಫಿಳ್ ಅನ್ವರ್ ಅಲೀ ಸಖಾಫಿ ಶಿರಿಯ ನೇತೃತ್ವದ ಇಖ್ವಾನುಶ್ಶಾಝಲಿಯ್ಯ ಬುರ್‍ದಾ ಸಂಘ ದೇಳಿ ಇವರಿಂದ ಬುರ್‍ದಾ ಆಲಾಪನೆ ನಡೆಯಲಿದ್ದು, ಹನೀಫ್ ರಝಾ ಖಾದ್ರಿ ನಅತೇ ಶರೀಫ್ ಪ್ರಸ್ತುತಪಡಿಸುವರು ಎಂದು ಪ್ರಕಟಣೆ ತಿಳಿಸಿದೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...