ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಪಡೆದ ಈ ತರಬೇತಿಯು ನಿಮ್ಮಲ್ಲಿರುವ ಮಾನವೀಯ ಮೌಲ್ಯವನ್ನು ಹೆಚ್ಚಿಸಿದೆ, ಅದನ್ನು ಗುರುತಿಸಿಕೊಳ್ಳಿ ಮತ್ತು ಉಳಿಸಿಕೊಳ್ಳಿ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಅನೂಪ್ ಪೂಜಾರಿ ಐಎಎಸ್ (ನಿವೃತ) ಯವರು ಅಭಿಪ್ರಾಯ ಪಟ್ಟರು. ಅವರು ರುಡ್‌ಸೆಟ್ ಸಂಸ್ಥೆಯಲ್ಲಿ ತರಬೇತಿ ಪಡೆಯುತ್ತಿರುವ ಶಿಭಿರಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಂಪ್ಯೂಟರ್ ಹಾರ್ಡವೇರ್ ತರಬೇತಿ ಕಾರ್ಯಕ್ರಮದ ಪ್ರಮಾಣ ಪತ್ರವನ್ನು ವಿತರಿಸಿದರು. ಚೆನ್ನೈನ ಮದ್ರಾಸ್ ಇನಿಸ್ಟಿಟ್ಯೂಟ್ ಆಫ್ ಡೆವಲೆಪ್‌ಮೆಂಟ್ ಸ್ಟಡೀಸ್ ಇದರ ನಿರ್ದೇಶಕರಾದ ಡಾ. ಶಶಂಕ್ ಭಿಡೆ ಯವರು ಮತ್ತು ಜಿಲ್ಲಾ ಕೌಶಲ್ಯಭಿವೃದ್ಧಿ ಕಛೇರಿ ಅಧಿಕಾರಿ ಶ್ರೀ ತಾರನಾಥ್, ರುಡ್‌ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ಎಮ್. ಜನಾರ್ಧನ್ ರವರು ಉಪಸ್ಥಿತರಿದ್ದರು. ನಿರ್ದೇಶಕರಾದ ಶ್ರೀ ವಿನಯ್ ಕುಮಾರ್ ರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು, ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು.
