Friday, April 5, 2024

ಬಂಟ್ವಾಳದ ಇರಾದಲ್ಲಿ ಕೋಟ್ಯಂತರ ರೂ ವೆಚ್ಚದಲ್ಲಿ ನಿರ್ಮಾಣ ವಾಗಲಿರುವ ಕೇಂದ್ರ ಕಾರಾಗೃಹ ಸ್ಥಳ ಪರಿಶೀಲನೆ ನಡೆಸಿದ ಎ.ಡಿ.ಜಿ.ಪಿ.ಮೇಘರಿಕ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಮುಡಿಪು ಸಮೀಪದ ಇರಾ ಮತ್ತು ಕುರ್ನಾಡು ಗ್ರಾಮದಲ್ಲಿ ನಿರ್ಮಾಣವಾಗಲಿರುವ ಕೇಂದ್ರ ಕಾರಾಗ್ರಹ ಮತ್ತು ಅಧಿಕಾರಿಗಳ ವಸತಿ ಸಮುಚ್ಚಯ ದ ಸ್ಥಳ ಪರಿವೀಕ್ಷಣೆ ಗೆ ಬೆಂಗಳೂರು ಎಡಿಜಿಪಿ ಎನ್.ಎಸ್.ಮೇಘರಿಕ್ ಅಗಮಿಸಿದ್ದರು.


ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ
ಸೂಕ್ತವಾದ ಮಾಹಿತಿ ಪಡೆದು ಶೀಘ್ರವಾಗಿ ಕಾಮಗಾರಿಯ ಆರಂಭಕ್ಕೆ ಯಾವ ಎಲ್ಲಾ ರೀತಿಯ ವ್ಯವಸ್ಥೆ ಗಳು ಬೇಕು ಎಂಬುದನ್ನು ತಿಳಿದುಕೊಂಡರು.
ಪ್ರಸ್ತುತ ಮಂಗಳೂರು ಬೆಸೆಂಟ್ ಕಾಲೇಜಿನ ಪಕ್ಕದಲ್ಲಿರುವ ಹಳೆಯ ಜೈಲಿನ ಜಾಗದ ಕೊರತೆಯನ್ನು ನೀಗಿಸಲು ಮಂಗಳೂರು ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಬಂಟ್ವಾಳ ತಾಲೂಕಿನ ಇರಾ ಮತ್ತು ಕುರ್ನಾಡು ಸಮೀಪದ ಕೈಗಾರಿಕಾ ಪ್ರದೇಶ ಅಭಿವೃದ್ಧಿ ನಿಗಮದವರು ನೀಡಿರುವ ಸುಮಾರು 64 ಎಕರೆ ಜಮೀನಿನಲ್ಲಿ ಅಂದಾಜು 250 ಕೋಟಿ ವೆಚ್ಚದಲ್ಲಿ 1000 ಜನ ಕೈದಿಗಳಿಗೆ ವ್ಯವಸ್ಥೆ ಇರುವ ಸುಸಜ್ಜಿತ ಮಾದರಿ ಜೈಲು ನಿರ್ಮಾಣ ಕ್ಕೆ ಮತ್ತು ಅಲ್ಲೇ ಪಕ್ಕದಲ್ಲಿ ಅಧಿಕಾರಿಗಳ ವಸತಿಗ್ರಹ ನಿರ್ಮಾಣಕ್ಕೆ ಸರಕಾರ ಮುಂದಾಗಿದ್ದಾರೆ.
ಪ್ರಥಮ ಹಂತದಲ್ಲಿ 100 ಕೋಟಿ ವೆಚ್ಚದಲ್ಲಿ ಜೈಲು ನಿರ್ಮಾಣ ಕಾರ್ಯ ನಡೆದ ಬಳಿಕ ಎರಡನೇ ಹಂತದಲ್ಲಿ ಅಧಿಕಾರಿಗಳ ವಸತಿ ನಿರ್ಮಾಣ ನಡೆಯುವ ಯೋಜನೆ ಹಾಕಿಕೊಂಡಿದ್ದಾರೆ
ಹಳೆಯ ಜೈಲು 11 ಎಕರೆ ಜಮೀನಿನಲ್ಲಿ ಇದ್ದು ಕೇವಲ 200 ಕೈದಿಗಳನ್ನು ಮಾತ್ರ ಜೈಲಿನಲ್ಲಿ ಹಾಕಲು ಸಾಧ್ಯವಾಗುತ್ತದೆ. ಉಳಿದಂತೆ ಅನೇಕ ಕೈದಿಗಳನ್ನು ಈ ಕೊರತೆಯಿಂದ ಬೇರೆ ಬೇರೆ ಜೈಲುಗಳಿಗೆ ವರ್ಗಾವಣೆ ಮಾಡಲಾಗುತ್ತದೆ.
ಈ ಸಮಸ್ಯೆ ನೀಗಿಸಲು ಮಾದರಿ ಕಾರಾಗ್ರಹ ನಿರ್ಮಾಣ ದ ಯೋಚನೆ ನಡೆಸಿ ಈಗಾಗಲೇ ಪೋಲೀಸ್ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಆಡಳಿತಾತ್ಮಕ ಅನುಮೋದನೆಯ ಹಂತದಲ್ಲಿ ದೆ ಎಂದು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಕಾರಾಗೃಹ ನಿರ್ಮಾಣ ಕ್ಕೆ ಸೂಚಿಸಲಾಗಿರುವ ಜಮೀನಿಗೆ ಎ.ಡಿ.ಜಿ.ಪಿ.ಮೇಘರಿಕ್ , ಪಶ್ಚಿಮ ವಲಯ ಐ.ಜಿ.ಪಿ.ಹರಿಶೇಖರನ್ ,ಪೋಲೀಸ್ ಕಮೀಷನರ್ ಟಿ.ಆರ್.ಸುರೇಶ್, ಎಸ್.ಪಿ.ಡಿ.ಎಮ್.ಲಕ್ಮೀ ಪ್ರಸಾದ್, ಡಿ.ಸಿ.ಪಿ.ಉಮಾ, ಎ.ಸಿ.ಪಿ.ಶ್ರೀನಿವಾಸ ಗೌಡ,ಬಂಟ್ವಾಳ ಎ.ಎಸ್.ಪಿ.ಸೈದುಲ್ ಅಡಾವತ್ , ಜಿಲ್ಲಾ ಕಾರಾಗೃಹ ಅಧೀಕ್ಷಕ ಚಂದನ್ , ಪಿ.ಡಬ್ಲೂ.ಡಿ.ಇಂಜಿನಿಯರ್ ಉಮೇಶ್ ಭಟ್, ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...

ನಂದನಹಿತ್ಲು ವೈದ್ಯನಾಥ, ಅರಸು, ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

ಬಂಟ್ವಾಳ: ಇಲ್ಲಿನ ಪೇಟಯಲ್ಲಿರುವ ನಂದನಹಿತ್ಲು ವೈದ್ಯನಾಥ,ಅರಸು,ಜುಮಾದಿ ಬಂಟ ದೈವಸ್ಥಾನದಲ್ಲಿ ಕಾಲವಧಿಯ ನೇಮೋತ್ಸವವು ಗುರುವಾರ ಬೆಳಗ್ಗೆ ಸಂಪನ್ನಗೊಂಡಿತು. ಕ್ಷೇತ್ರದ ತಂತ್ರಿಗಳಾದ ಪೊಳಲಿ ಗಿರಿಪ್ರಕಾಶ್ ತಂತ್ರಿವರ ನೇತೃತ್ವದಲ್ಲಿ‌ ನಡೆದ ವಿವಿಧ ವೈಧಿಕ ವಿಧಿವಿಧಾನಗಳ ಬಳಿಕ ಮೊದಲದಿನ ಶ್ರೀ...