ಬಂಟ್ವಾಳ: ಈ ದಿನ ಬಾಳ್ತಿಲ ಗ್ರಾಮ ಪಂಚಾಯತ್ ನಲ್ಲಿ ಜರುಗಿದ “ಹೆಣ್ಣು ಮಕ್ಕಳನ್ನು ಓದಿಸಿ, ಹೆಣ್ಣು ಮಕ್ಕಳನ್ನು ರಕ್ಷಿಸಿ “ಬೀದಿನಾಟಕ ಕಾರ್ಯಕ್ರಮ. ದ. ಕ. ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಬಾಳ್ತಿಲ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಹೆಣ್ಣು ಮಕ್ಕಳ ರಕ್ಷಣೆಯ ಅರಿವಿನ ನಾಟಕ ಪ್ರದರ್ಶನಗೊಂಡಿತು.

ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಠಲ್, ಪಂಚಾಯತ್ ಸದಸ್ಯ ಕೆ. ಆನಂದ ಶೆಟ್ಟಿ ,ಮೇಲ್ವಿಚಾರಕಿ ಶಾಲಿನಿ, ಲಲಿತಾ, ಅಂಗನವಾಡಿ ಕಾರ್ಯಕರ್ತೆಯರು, ಪಂಚಾಯತ್ ಸಿಬ್ಬಂದಿ ವರ್ಗ, ಸಾರ್ವಜನಿಕರು, ಪೋಷಕರು,ಮಕ್ಕಳು ಉಪಸ್ಥಿತರಿದ್ದರು.