ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಶ್ರೀ ಸರ್ವಜ್ಞ ಜಯಂತಿ ಆಚರಣೆ ಕಾರ್ಯಕ್ರಮ ತಾಲೂಕು ತಹಶಿಲ್ದಾರರ ಕಚೇರಿ ಯಲ್ಲಿ ಬುಧವಾರ ಬೆಳಿಗ್ಗೆ ನಡೆಯಿತು.
ಕಾರ್ಯಕ್ರಮ ವನ್ನು ಉಪತಹಶೀಲ್ದಾರ ರಾಜೇಶ್ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿ ರಾಜಣ್ಣ, ಮಾತನಾಡಿ ಜನರ ಸಮಸ್ಯೆ ಗಳಿಗೆ ಸ್ಪಂದಿಸುವ ಜೊತೆಗೆ ವಾಸ್ತವ ವಿಚಾರಗಳನ್ನು ಎಲ್ಲರಿಗೂ ತಿಳಿಸಿದ ಮಹಾನ್ ವ್ಯಕ್ತಿ ಸರ್ವಜ್ಞ ಎಂದು ಅವರು ಹೇಳಿದರು.
ಮಹಾ ವ್ಯಕ್ತಿಗಳಲ್ಲಿ ಮಹಾವ್ಯಕ್ತಿಯ ಗುಣಗಳನ್ನು ಹೊಂದಿರುವ ಸರ್ವಜ್ಞ ಅದ್ಬುತ ವಚನಕಾರ, ಇವರ ಆದರ್ಶ ಹಾಗೂ ಜೀವನ ಶೈಲಿ ಇತರರಿಗೆ ಮಾದರಿಯಾಗಲಿ ಎಂದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಪುರಸಭಾ ಸದಸ್ಯ ಹರಿಪ್ರಸಾದ್, ಮಾಜಿ ಪುರಸಭಾ ಸದಸ್ಯ ಸದಾಶಿವ ಬಂಗೇರ, ಕುಲಾಲ ಕುಂಬಾರ ಯುವವೇದಿಕೆ ಅಧ್ಯಕ್ಷ ಸುಕುಮಾರ್ ಬಂಟ್ವಾಳ, ರಾಜ್ಯ ಕುಲಾಲ ಕುಂಬಾರ ಮಹಿಳಾ ಘಟಕದ ಬಂಟ್ವಾಳ ಘಟಕದ ಅಧ್ಯಕ್ಷೆ ಭಾರತಿಸೇಸಪ್ಪ, ವಿಶೇಷ ಉಪನ್ಯಾಸಕ ಬೆಂಜನಪದವು ಪದವಿ ಕಾಲೇಜಿನ ಪ್ರಾಧ್ಯಾಪಕ ಲೋಕೇಶ್ ನಾರ್ಶ ಮತ್ತಿತರರು ಉಪಸ್ಥಿತರಿದ್ದರು.

ಉಪತಹಶೀಲ್ದಾರ್ ರವಿಶಂಕರ್, ಪ್ರಭಾರ ಉಪತಹಶೀಲ್ದಾರ್ ಸೀತಾರಾಮ ಗ್ರೆಟ್ಟಾ ಮಸ್ಕರೇಞಂಸ್, ತಾಲೂಕು ಕಚೇರಿ ಸಿಬಂದಿ ವರ್ಗ, ಗ್ರಾಮ ಲೆಕ್ಕಾಧಿಕಾರಿ ಗ್ರಾಮ ಸಹಾಯಕರು ಸಾರ್ವಜನಿಕರು ಹಾಜರಿದ್ದರು.
ಆಹಾರ ಶಾಖೆಯ ಶ್ರೀನಿವಾಸ ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್ ಹಾಜರಿದ್ದರು.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿ ಪಳ್ಳ ಹಾಜರಿದ್ದರು.
ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಡಿ.ಎಂ.ಕುಲಾಲ್ ಪ್ರಸ್ತಾವಿಸಿದರು. ಕಂದಾಯ ನಿರೀಕ್ಷಕ ನವೀನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here