ಬಂಟ್ವಾಳ: ಚಿತ್ರದುರ್ಗದ ಸಿರಿಗನ್ನಡ ಬಳಗದವರು ನಡೆಸಿದ ಕನ್ನಡ ಪ್ರತಿಭಾ ಪರೀಕ್ಷೆಯಲ್ಲಿ ಬಂಟ್ವಾಳ ಶೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕೆ. ಧೀರೇಶ್ ಕುಮಾರ್ ರಾಜ್ಯಮಟ್ಟದಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಶೀವತ್ಸ ಕೆ. ಮತ್ತು ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುನಿಲ್ ಜಿಲ್ಲಾ ಮಟ್ಟದಲ್ಲ್ಲಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಇವರಿಗೆ ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ- ಉಪನ್ಯಾಸಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.