ಬಂಟ್ವಾಳ: ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಕ್ಷೇತ್ರವೂ ಬಹಿವಾಗಿ ವಿಸ್ತರಣೆಗೊಳ್ಳುತ್ತಿದೆ. ವಿದ್ಯಾರ್ಥಿಗಳು ಪಾರಂಪರಿಕ ಕೋರ್ಸ್‌ಗಳ ಜತೆಗೆ ಕೌಶಲ ಕೇಂದ್ರೀತ ತಾಂತ್ರಿಕ ಶಿಕ್ಷಣ ಕೋರ್ಸಿನ ಕಡೆಗೆ ಒಲವು ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ ಇಂದು ವಿದ್ಯಾರ್ಥಿಗಳು ಹೆಚ್ಚು ಉದ್ಯೋಗಾವಕಾಶಗಳನ್ನು ಒದಗಿಸುವ ಪದವಿಯ ಕಡೆ ಗಮನ ಕೇಂದ್ರೀಕರಿಸುತ್ತಿದ್ದಾರೆ. ಇಂಟಿರಿಯರ್ ಡಿಸೈನ್ ಪದವಿ ಕೋರ್ಸ್ ದೇಶ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಬಹುಬೇಡಿಕೆಯ ಪದವಿಯಾಗಿದೆ ಎಂದು ಪ್ರಾಧ್ಯಾಪಕ ಪ್ರೊ. ಕಿಶೋರ್ ಕುಮಾರ್ ಹೇಳಿದರು.
ಅವರು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪರ್ವ ಕಾಲೇಜಿನಲ್ಲಿ ನಡೆದ ’ಬಿ.ಎಸ್ಸಿ ಇಂಟಿರಿಯರ್ ಡಿಸೈನ್ ಮತ್ತು ಡೆಕೊರೇಷನ್:ಅಧ್ಯಯನ ಮತ್ತು ಅವಕಾಶಗಳು’ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಇಂಟಿರಿಯರ್ ಡಿಸೈನ್ ಕಡೆಗೆ ವಿದ್ಯಾರ್ಥಿಗಳು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಕೌಶಲ ಕೇಂದ್ರೀತ ಶಿಕ್ಷಣವು ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಯನ್ನು ಗುರುತಿಸಲು ಸಾಧ್ಯವಾಗುತ್ತದೆ. ಸೃಜನಾತ್ಮಕ ಯೋಜನೆಗಳನ್ನು ರೂಪಿಸಲು ಮತ್ತು ಕಾರ್‍ಯರೂಪಕ್ಕೆ ತರಲು ಇಚಿತಹ ಪದವಿಗಳು ಅವಕಾಶವನ್ನು ಒದಗಿಸುತ್ತದೆ. ಹೊಸ ಹೊಸ ತಾಂತ್ರಿಕ ಅನ್ವೇಷಣೆಗಳಿಗೆ ಪೂರಕವಾಗಿ ಕೆಲಸ ನಿರ್ವಹಿಸುವ, ಗ್ರಾಹಕರ ಬೇಡಿಕೆಗಳನ್ನು ಪೂರೈಸಬಲ್ಲ ಜನಪ್ರಿಯ ಪದವಿ ಬಿ.ಎಸ್ಸಿ ಇಂಟಿರಿಯರ್ ಡಿಸೈನ್ ಪದವಿಯಾಗಿದೆ. ಹಾಗಾಗಿ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗಾವಕಾಶಗಳನ್ನು ತೆರೆದಿಡುವ ಕೋರ್ಸ್‌ಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಅಗತ್ಯವಿದೆ ಎಂದರು.
ಬಂಟ್ವಾಳ ಎಸ್.ವಿ.ಎಸ್. ಪ.ಪೂ.ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ಬಾಲಕೃಷ್ಣ ಗೌಡ ಅಧ್ಯಕ್ಷತೆ ವಹಿಸಿದರು. ಉಪನ್ಯಾಸಕ ಚೇತನ್ ಮುಂಡಾಜೆ ಸ್ವಾಗತಿಸಿ, ಬಿ.ಎಸ್ಸಿ ಇಂಟಿರಿಯರ್ ಡಿಸೈನ್ ವಿಭಾಗದ ಪ್ರಾಧ್ಯಾಪಕ ಪ್ರೋ. ವಿಜಯ ಜೊಸ್ಲಿ ಅಲ್ಮೇಡಾ ವಂದಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here