ವಿಟ್ಲ: ಶ್ರೀ ಒಡಿಯೂರು ರಥೋತ್ಸವ-ತುಳುನಾಡ್ದ ಜಾತ್ರೆಯ ಅಂಗವಾಗಿ ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ವಿದ್ಯಾರ್ಥಿಗಳಿಂದ  ವಿಜ್ಞಾನ ಮಾದರಿಗಳ ಪ್ರದರ್ಶನ ಜನಮನವನ್ನು ಆಕರ್ಷಿಸಿತು.
ಪ್ರದರ್ಶನವನ್ನು ಉದ್ಘಾಟಿಸಿದ ಶ್ರೀ ಗುರುದೇವಾನಂದ ಸ್ವಾಮೀಜಿ ಮಾತನಾಡಿ ವಿಜ್ಞಾನದ ಆವಿಷ್ಕಾರಗಳೊಂದಿಗೆ ಅಧ್ಯಾತ್ಮಿಕ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವುದರಿಂದ ಭವಿಷ್ಯದಲ್ಲಿ ಸತ್ಪ್ರಜೆಗಳನ್ನು ನಿರ್‍ಮಾಣ ಮಾಡಿ ಸದೃಢ ರಾಷ್ಟ್ರ ನಿರ್‍ಮಾಣ ಸಾಧ್ಯ ಎಂದು ತಿಳಿಸಿದರು.
ಸಾಧ್ವಿ ಶ್ರೀ ಮಾತಾನಂದಮಯೀಯವರು ಉಪಸ್ಥಿತರಿದ್ದರು. ಮುಖ್ಯ ಅತಿಥಿಗಳಾಗಿದ್ದ ಮೈಸೂರಿನ ಪೊಲೀಸ್ ವರಿಷ್ಠಾಧಿಕಾರಿ ಡಾ. ಧರಣೀದೇವಿ ಮಾಲಗತ್ತಿಯವರು ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರಶಂಸಿಸಿದರು. ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮುಂಬೈ ಘಟಕದ ಪ್ರಧಾನ ಕಾರ್‍ಯದರ್ಶಿ ಪೇಟೆಮನೆ ಪ್ರಕಾಶ್ ಕೆ. ಶೆಟ್ಟಿ, ಪುಣೆ ಘಟಕದ ಪ್ರಧಾನ ಕಾರ್‍ಯದರ್ಶಿ ನಗ್ರಿಗುತ್ತು ರೋಹಿತ್ ಡಿ. ಶೆಟ್ಟಿ, ಮುಂಬೈನ ಉದ್ಯಮಿಗಳಾದ ವಾಮಯ್ಯ ಬಿ. ಶೆಟ್ಟಿ, ಮೋಹನ್ ಹೆಗ್ಡೆ ಥಾನೆ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ. ಶೆಟ್ಟಿ, ಮುಂಬೈ ಘಟಕದ ಅಧ್ಯಕ್ಷೆ ರೇವತಿ ವಿ. ಶೆಟ್ಟಿ, ಶಾಲಾ ಸಂಚಾಲಕ ಗಣಪತಿ ಭಟ್ ಸೇರಾಜೆ, ಮುಖ್ಯ ಶಿಕ್ಷಕ ಜಯಪ್ರಕಾಶ್ ಶೆಟ್ಟಿ ಎ. ಉಪಸ್ಥಿತರಿದ್ದರು.
ಪ್ರದರ್ಶನವನ್ನು ಸಮೀಪದ ಶಾಲಾ ವಿದ್ಯಾರ್ಥಿಗಳು ಹಾಗೂ ಊರ-ಪರವೂರ ಆಸಕ್ತರು ನೋಡಿ ವಿಸ್ಮಯ ವ್ಯಕ್ತಪಡಿಸಿದರು. ವಿಜ್ಞಾನ ಪ್ರಚಾರಕರಾದ ನಿವೃತ್ತ ಪ್ರೊಫೆಸರ್ ಡಿ.ಆರ್.ಬಳೂರಗಿ ಅವರ ಪೂರ್ಣ ಮಾರ್ಗದರ್ಶನದಲ್ಲಿ ವಿದ್ಯಾಪೀಠದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ವಿಜ್ಞಾನ ಪ್ರದರ್ಶನವನ್ನು ಸುಂದರವಾಗಿ ಜೋಡಿಸಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here