Friday, April 5, 2024

’ಯುವಕರು ತುಳು ಭಾಷೆ, ಸಾಹಿತ್ಯದ ಬಗ್ಗೆ ಪ್ರೀತಿ, ಅಭಿಮಾನವಿಟ್ಟಾಗ ಹಿಂದಿನ ವೈಭವ ಕಾಣಬಹುದು’-ಒಡಿಯೂರು ಶ್ರೀ

ವಿಟ್ಲ: ತುಳು ಪ್ರತಿಯೊಬ್ಬರ ಮನಸ್ಸನ್ನು ಸೆಳೆಯತಕ್ಕ ಹೃದಯಸ್ಪರ್ಶಿ ಭಾಷೆಯೆನಿಸಿದೆ. ತುಳುವರು ಒಟ್ಟಾದಾಗ ಮಾತ್ರ ತುಳುವರ ಶಕ್ತಿಯ ವಿಶ್ವರೂಪ ದರ್ಶನವಾಗಲು ಸಾಧ್ಯ. ಯುವಕರು ತುಳು ಭಾಷೆ, ಸಾಹಿತ್ಯದ ಬಗ್ಗೆ ಅದಮ್ಯ ಪ್ರೀತಿ, ಅಭಿಮಾನವಿಟ್ಟಾಗ ತುಳುನಾಡಿನ ಹಿಂದಿನ ಕಾಲದ ವೈಭವ ಮತ್ತೆ ಮರುಕಳಿಸಬಹುದು ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು.
ಅವರು ಶುಕ್ರವಾರ ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದಲ್ಲಿ ಫೆ. 14 ಮತ್ತು 15 ರಂದು ನಡೆಯಲಿರುವ ತುಳು ಸಾಹಿತ್ಯ ಸಮ್ಮೇಳನ ಮತ್ತು ತುಳುನಾಡ್ದ ಜಾತ್ರೆ- ಒಡಿಯೂರು ರಥೋತ್ಸವ ಕಾರ್‍ಯಕ್ರಮದ ರೂಪುರೇಷೆಯ ಬಗ್ಗೆ ನಡೆದ ಸಭೆಯಲ್ಲಿ ಆಶೀರ್ವಚನ ನೀಡಿದರು. ಯಾವುದೇ ಒಳ್ಳೆಯ ಕಾರ್‍ಯಗಳಿಗೆ ವಿಘ್ನಗಳಿರುವುದು ಸಹಜ.
ಫೆ. 14 ರಂದು ಸಂಶೋಧಕಿ, ಸಾಹಿತಿ ಡಾ. ಇಂದಿರಾ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯುವ ’ತುಳು ಬದ್ಕ್‌ದ ನಿಲೆ-ಬಿಲೆ ವಿಚಾರದ ಅಡಿಯಲ್ಲಿ ತುಳು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಸಮ್ಮೇಳನದಲ್ಲಿ ಪುರಾತನ ತುಳು, ನಡುಗಾಲದ ತುಳು, ಆಧುನಿಕ ತುಳು ಭಾಷೆ ಬೆಳೆದು ಬಂದ ಬಗ್ಗೆ ವಿಮರ್ಶೆ ನಡೆಯಲಿದೆ. ಇದೇ ಸಂದರ್ಭದಲ್ಲಿ ತುಳು ಭಾಷಾಭಿಮಾನಿಗಳಿಗೆ ಪೂರಕವಾಗಿ ’ಅದೃಷ್ಟ ತುಳುವೆ ಬಂಗಾರ್ ಪೆಜುವೆ’ ಎಂಬ ಕಾರ್‍ಯಕ್ರಮ ವಿಶೇಷವಾಗಿ ನಡೆಯಲಿದೆ. ಫೆ.15 ರಂದು ಎರಡು ಗ್ರಾಮಗಳನ್ನು ಸಂಧಿಸುವ ವಿಶಿಷ್ಟ ರಥೋತ್ಸವ ನಡೆಯಲಿದೆ ಎಂದು ತಿಳಿಸಿದರು.
ತುಳು ಸಮ್ಮೇಳನದ ಸಂಚಾಲಕ ಡಾ. ವಸಂತಕುಮಾರ್ ಪೆರ್ಲ ಮಾತನಾಡಿ ತುಳು 8 ನೇ ಪರಿಚ್ಛೇದಕ್ಕೆ ಸೇರಲಿರುವ ಭಾಷೆಗಳಲ್ಲಿ ಮೊದಲನಯದಗಿ ಇರುವುದು ನಮ್ಮೇಲ್ಲರ ಭಾಗ್ಯವಾಗಿದೆ. ತುಳು ಕಾರ್‍ಯಕ್ರಮ ಹೆಚ್ಚೆಚ್ಚು ನಡೆಯಬೇಕು ಎಂದು ತಿಳಿಸಿ, ಸಮ್ಮೇಳನದಲ್ಲಿ ನಡೆಯುವ ನಾನಾ ಗೋಷ್ಠಿಗಳ ಬಗ್ಗೆ ವಿವರಣೆ ನೀಡಿದರು.
ಈ ಸಂದರ್ಭದಲ್ಲಿ ಒಡಿಯೂರು ತುಳು ಕೂಟದ ಸ್ಥಾಪಕ ಅಧ್ಯಕ್ಷ ಮಲಾರ್ ಜಯರಾಮ ರೈ, ಸ್ವಾಗತ ಸಮಿತಿಯ ಸಂಚಾಲಕ ವಾಸುದೇವ ಆರ್. ಕೊಟ್ಟಾರಿ, ಹೊರೆ ಕಾಣಿಕೆ ಸಮಿತಿ ಸಂಚಾಲಕ ದೇವಿಪ್ರಸಾದ್ ಶೆಟ್ಟಿ ಅನಂತಾಡಿ ಮಾತನಾಡಿದರು. ಆರ್ಥಿಕ ಸಮಿತಿ ಸಂಚಾಲಕ ಎ. ಸುರೇಶ್ ರೈ, ಶ್ರೀಗುರುದೇವ ವಿದ್ಯಾ ಸಂಸ್ಥೆಗಳ ಸಂಚಾಲಕ ಗಣಪತಿ ಭಟ್ ಸೇರಾಜೆ, ಒಡಿಯೂರು ಶ್ರೀವಜ್ರಮಾತಾ ಮಹಿಳಾ ಸೇವಾ ಸಮಿತಿ ಅಧ್ಯಕ್ಷ ಸರ್ವಾಣಿ ಪಿ. ಶೆಟ್ಟಿ, ಶ್ರೀ ಸಂಸ್ಥಾನದ ಕಾರ್‍ಯನಿರ್ವಾಹಕ ಪದ್ಮನಾಭ ಒಡಿಯೂರು ಉಪಸ್ಥಿತರಿದ್ದರು.
ಪ್ರಚಾರ ಸಮಿತಿ ಸಂಚಾಲಕ ಅಜಿತ್‌ಕುಮಾರ್ ಶೆಟ್ಟಿ ಸ್ವಾಗತಿಸಿದರು. ಸ್ವಯಂ ಸೇವಕ ಸಮಿತಿ ಸಂಚಾಲಕ ಸದಾಶಿವ ಅಳಿಕೆ ವಂದಿಸಿದರು. ಯಶವಂತ ವಿಟ್ಲ ಕಾರ್‍ಯಕ್ರಮ ನಿರೂಪಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸಾವು ಗೆದ್ದು ಬಂದ ಸಾತ್ವಿಕ್ ; ಸತತ 20 ಗಂಟೆಗಳ ಕಾರ್ಯಾಚರಣೆ ಯಶಸ್ವಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಕಂದ ಸಾತ್ವಿಕ್​​ನನ್ನು ಕೊನೆಗೂ ರಕ್ಷಣಾ ಪಡೆಯ ಸಿಬ್ಬಂದಿ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇಂಡಿಯ ಲಚ್ಯಾನ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದಾಗ ಮಗು ಕೊಳವೆ ಬಾವಿಗೆ ಬಿದ್ದಿತ್ತು. ಈ ಸಂಬಂಧ...

ಕಲ್ಲಡ್ಕ: ಖಾಸಗಿ ಬಸ್ಸಿಗೆ ಪಿಕಪ್ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ...

ಕೊಳವೆ ಬಾವಿಗೆ ಬಿದ್ದ 2 ವರ್ಷದ ಕಂದಮ್ಮ : ರಕ್ಷಣೆಗೆ ಅರ್ಧ ಅಡಿಯಷ್ಟೇ ಬಾಕಿ

ವಿಜಯಪುರ: ಕೊಳವೆ ಬಾವಿಗೆ ಬಿದ್ದಿರುವ ಮಗು ಸಾತ್ವಿಕ ಸುರಕ್ಷಿತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ಬಂದಿದೆ. ಮಗು ಸುರಕ್ಷಿತವಾಗಿದ್ದು, ಕಾರ್ಯಾಚರಣೆ ಆಶಾದಾಯಕವಾಗಿದೆ. 16 ಅಡಿ ಆಳದಲ್ಲಿರುವ ಸಾತ್ವಿಕ್ ರಕ್ಷಣೆಗಾಗಿ 22 ಅಡಿ ಆಳದವರೆಗೆ ಸುರಂಗ...