ವಿಟ್ಲ: ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪವಿಭಾಗ ಯೋಜನೆಯ ಅಡಿಯಲ್ಲಿ ಅಂದಾಜು 2 ಲಕ್ಷ ರೂ ವೆಚ್ಚದ ಸಾರ್ವಜನಿಕ ಶೌಚಾಲಯವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಜಯಶ್ರೀ ಕೋಡಂದೂರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪುಣಚ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರತಿಭಾ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷರಾದ ಮಹೇಶ್ ಶೆಟ್ಟಿ ಬೈಲುಗುತ್ತು, ತಾಲೂಕು ಪಂಚಾಯಿತಿ ಸದಸ್ಯೆ ಕವಿತಾ ಸುಬ್ಬ ನಾಯ್ಕ, ಪಿಡಿಒ ಲಾವಣ್ಯ ಮತ್ತು ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here