Thursday, April 11, 2024

ರೋಟರಿ ಟೌನ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ: ಸನ್ಮಾನ ಸಮಾರಂಭ

ಬಂಟ್ವಾಳ: ಮನುಷ್ಯನ ಜೀವಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ವಾಹನ ಅಪಘಾತದಲ್ಲಿ  ಮೃತಪಟ್ಟವರು ಹೆಚ್ಚು. ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿದರೆ ಅಮೂಲ್ಯವಾದ ಜೀವ ರಕ್ಷಣೆ ಮಾಡಲು ಸಾಧ್ಯ,  ಎಂದು ಬಂಟ್ವಾಳ ಸಂಚಾರಿ ಪೊಲೀಸ್ ಉಪ ನಿರೀಕ್ಷಕರಾದ ಮಂಜುಳಾ ಕೆ.ಎಂ ಹೇಳಿದರು.
ಅವರು ರೋಟರಿ ಸಭಾಂಗಣ ಬಿ.ಸಿ.ರೋಡು ಇಲ್ಲಿ ನಡೆದ ರಸ್ತೆ ಸುರಕ್ಷತಾ ಸಪ್ತಾಹ – 2019 ಅಂಗವಾಗಿ ನಡೆದ ಸಭೆಯಲ್ಲಿ  ಸನ್ಮಾನ ಸ್ವೀಕರಿಸಿ   ರೋಟರಿ ಸದಸ್ಯರೊಂದಿಗೆ   ಸಂವಾದ ನಡೆಸಿದರು. ಬಿ ಸಿ ರೋಡ್ ವಾಹನ ದಟ್ಟಣೆ ಸುಗಮವಾಗಿ ನಡೆಯಲು ಶಾಸಕರು ಹಾಗೂ ನಗರಸಭೆ ಜೊತೆಗೆ ಮಾತುಕತೆ ನಡೆಸಿ ಸಮಸ್ಯೆ ಬಗೆ ಹರಿಸಲು ಪ್ರಯತ್ನ ನಡೆದಿದೆ ಎಂದು ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಹೇಳಿದರು.  ರೋಟರಿ  ಕ್ಲಬ್ ಬಂಟ್ವಾಳ ಟೌನ್ ಇದರ ಅಧ್ಯಕ್ಷ ರಾದ ಉಮೇಶ್ ನಿರ್ಮಲ್ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ರೋಟರಿ ವಲಯ 4ರ ಕಾರ್ಯದರ್ಶಿ ನಾರಾಯಣ ಹೆಗ್ಡೆ, ಕಾರ್ಯದರ್ಶಿ ಜಯರಾಜ್ ಎಸ್ ಬಂಗೇರ, ಪದಾಧಿಕಾರಿಗಳಾದ ಶಾಂತ್ ರಾಜ್, ವಿಂದ್ಯಾ ಎಸ್ ರೈ, ವಿಧ್ಯಾ ಚಂದ್ರಹಾಸ ಶೆಟ್ಟಿ, ಶಂಕರ್ ಶೆಟ್ಟಿ, ಪ್ರಕಾಶ್ ಆಳ್ವ, ಯಶವಂತ್ ವಿಟ್ಲ, ರಾಜ್ ಕುಮಾರ್ ಉಪಸ್ತಿತರಿದ್ದರು.

More from the blog

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...