Sunday, April 7, 2024

ಪಾಣೆಮಂಗಳೂರು: ಯುವಮೋರ್ಚಾ ಕಾರ್ಯಕಾರಿಣಿ ಸಭೆ

ಬಂಟ್ವಾಳ: ಹುಟ್ಟಿನಿಂದ ಸಾವಿನವರೆಗೆ ಮತ್ತು ಸಾವಿನ ನಂತರ ಅವಲಂಬಿತರಿಗೆ ಜೀವನ ಭದ್ರತೆ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿಯನ್ನು ನೀಡಿ ಭಾರತವನ್ನು ಪರಮವೈಭವದ ಹಾದಿಯಲ್ಲಿ ತಂದು ನಿಲ್ಲಿಸಿದ ಮೋದಿ ನೇತೃತ್ವದ ಸ್ಥಿರ ಸರಕಾರ ಮತ್ತೊಮ್ಮೆ ಗೆಲ್ಲಿಸುವ ಅಗತ್ಯ ಮತ್ತು ಅನಿವಾರ್ಯತೆ ಇದೆ. ಈ ನಿಟ್ಟಿನಲ್ಲಿ ಮತ್ತೊಮ್ಮೆ ಮೋದಿ ಎಂಬ ಧ್ಯೇಯ ವಾಕ್ಯದೊಂದಿಗೆ ಯುವಮೋರ್ಚಾ ಕಾರ್ಯಕರ್ತರು ಚುನಾವಣಾ ಕಣಕ್ಕೆ ದುಮುಕಬೇಕೆಂದು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್‌ರವರು ಹೇಳಿದರು.


ಪಾಣೆಮಂಗಳೂರು ಗ್ರಾಮದ ಕರುಣಾಕರ ಮೆಲ್ಕಾರ್ ಇವರ ಮನೆಯಲ್ಲಿ ನಡೆದ ಬಂಟ್ವಾಳ ಯುವಮೋರ್ಚಾ ಕಾರ್ಯಕಾರಿಣಿ ಉದ್ಫಾಟಸಿ ಅವರು ಮಾತನಾಡಿದರು. ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವದಾಸ್ ಶೆಟ್ಟಿಯವರು ಮಾತನಾಡಿ ಜಗತ್ತಿನಲ್ಲೆ ಗೌರವಗಳಿಂದ ಮೊದಿ ಸರಕಾರ ಮತ್ತೊಮ್ಮೆ ಆಡಳಿತ ನಡೆಸುವಂತಾಗಬೇಕಾದರೆ ಯುವಶಕ್ತಿ ಜಾಗೃತವಾಗಬೇಕು. ಸುಳ್ಳು ಮಾತಾಡುವ ಭ್ರಷ್ಟಾಚಾರ ಮಾಡುವ ವಿರೋಧ ಪಕ್ಷಗಳ ನಿಜಬಣ್ಣವನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಯುವಮೋರ್ಚಾ ಕಾರ್ಯಕರ್ತರು ಮಾಡಬೇಕೆಂದರು ಚುನಾವಣೆಯ ಸಮಯ ರಾಷ್ಟ್ರೀಯ ಮತ್ತು ರಾಜ್ಯ ಯುವಮೋರ್ಚಾದಿಂದ ನೀಡಿರುವ ಕೆಲಸಗಳನ್ನು ಯಶಸ್ವಿಯಾಗಿ ಮಾಡುವುದಲ್ಲದೆ ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ವಿರೋದ ಪಕ್ಷಗಳು ಎಣಿಸಲಾರದಂತ ಗೆಲುವಿನ ಅಂತರ ಹೆಚ್ಚಿಸುವಲ್ಲಿ ಕಾರ್ಯಕರ್ತರು ಶ್ರಮವಹಿಸಿ ಕೆಲಸ ಮಾಡುವಂತೆ ಜಿಲ್ಲಾ ಯುವ ಮೋರ್ಚಾ ಪ್ರ.ಕಾರ್ಯದರ್ಶಿ ಹರೀಶ್ ಮೂಡಶೆಡ್ಡೆ ತಿಳಿಸಿದರು.
ಸಾಮಾಜಿಕ ಜಾಲತಾಣಗಳನ್ನು ಬಿಜೆಪಿಯ ಗೆಲುವಿಗೆ ಪೂರಕವಾಗಿ ಬಳಸಿಕೊಳ್ಳುವ ಬಗ್ಗೆ ಕಿವಿಮಾತು ಹೇಳಿದರು. ಇನ್ನೊರ್ವ ಯುವಮೋರ್ಚಾ ಪ್ರ.ಕಾರ್ಯದರ್ಶಿ ಸಂದೇಶ್ ಶೆಟ್ಟಿ ಕಾರ್ಯಕರ್ತರು ನಿರಂತರ ಚಟುವಟಿಕೆಯಲ್ಲಿರಬೇಕು ಎಂದರು.
ಕ್ಷೇತ್ರ ಕಾರ್ಯದರ್ಶಿ ರಂಜಿತ್ ಮೈರ, ಯುವಮೋರ್ಚಾ ಜಿಲ್ಲಾ ಕಾರ್ಯದರ್ಶಿ ಸುದರ್ಶನ್ ಬಜ ಉಪಸ್ಥಿತರಿದ್ದರು. ಬಂಟ್ವಾಳ ಯುವಮೋರ್ಚಾ ಪ್ರ.ಕಾರ್ಯದರ್ಶಿ ಸಂತೋಷ್ ರಾಯಿಬೆಟ್ಟು ಸ್ವಾಗತಿಸಿ, ಕಾರ್ಯದರ್ಶಿ ಸುರೇಶ್ ಕೋಟ್ಯಾನ್ ವಂದಿಸಿದರು. ಇನ್ನೊರ್ವ ಕಾರ್ಯದರ್ಶಿ ಲೋಹಿತ್ ಕೊಳ್ನಾಡು ಕಾರ್ಯಕ್ರಮ ನಿರ್ವಹಿಸಿದರು.

More from the blog

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...

ದ್ವಿಚಕ್ರ ವಾಹನಕ್ಕೆ ರಿಕ್ಷಾ ಡಿಕ್ಕಿ : ಸಹಸವಾರ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ರಿಕ್ಷಾ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿ ಸಂಚಾರ ಮಾಡುತ್ತಿದ್ದ ಸಹಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ. ಮನೆಯಿಂದ...