Saturday, April 6, 2024

ಅಮ್ಟೂರು ಪೂವಳ ರಸ್ತೆ ಕಾಂಕ್ರೀಟ್ ಕರಣಕ್ಕೆ ಶಿಲಾನ್ಯಾಸ

ಬಂಟ್ವಾಳ: ಅಮ್ಟೂರು ಗ್ರಾಮದ ಪೂವಳ ರಸ್ತೆಯ ಕಾಂಕ್ರೀಟ್ ಕರಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಸೋಮವಾರ ಬೆಳಿಗ್ಗೆ ನಡೆಯಿತು.
ತೀರಾ ದುರಸ್ತಿಯ ಲ್ಲಿದ್ದ ಕಲ್ಲಡ್ಕ ಸಮೀಪದ ಅಮ್ಟೂರು ಗ್ರಾಮದ ಪೂವಳ ರಸ್ತೆಯ ಕಾಂಕ್ರೀಟ್ ಕರಣ ಕಾಮಗಾರಿಗೆ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಶಿಲಾನ್ಯಾಸ ನೆರವೇರಿಸಿದರು.

ಶಾಸಕರ ನಿಧಿಯಿಂದ ಹತ್ತುಲಕ್ಷ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣವಾಗಲಿದೆ. ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೂವಳ ರಸ್ತೆಯ ಕಾಂಕ್ರೀಟ್ ಕರಣಕ್ಕೆ ಶಾಸಕರು ಅನುದಾನ ಬಿಡುಗಡೆಗೊಳಿಸಿ, ಈ ಭಾಗದ ಜನರ ಸಮಸ್ಯೆಗೆ ಪರಿಹಾರ ನೀಡಿದ್ದಾರೆ ಎಂದು ಅವರು ಹೇಳಿದರು.
ಮಾಜಿ ತಾ.ಪಂ.ಉಪಾಧ್ಯಕ್ಷ ದಿನೇಶ್ ಅಮ್ಟೂರು ಮಾತನಾಡಿ ಕಳೆದ ಅರುವತ್ತೈದು ವರ್ಷಗಳಿಂದ ಈ ರಸ್ತೆಗೆ ಅಲ್ಲಿಯ ಗ್ರಾಮಸ್ಥರು‌ ಹಾಗೂ ಈ ಭಾಗದ ಬಿಜೆಪಿ ಮುಖಂಡ ಗೋಪಾಲಕೃಷ್ಣ ಪೂವಳ ಅವರು ರಸ್ತೆ ದುರಸ್ತಿ ಗೆ ಮನವಿ ನೀಡುತ್ತಾ ಬಂದಿದ್ದಾರೆ. ಇವರ ಪ್ರಯತ್ನಕ್ಕೆ ಕೊನೆಗೆ ಶಾಸಕ ರಾಜೇಶ್ ನಾಯಕ್ ಅವರು ಸ್ಪಂದನೆ ನೀಡಿ ರಸ್ತೆಯ ಅಭಿವೃದ್ಧಿ ಗೆ ಸಹಕಾರ ನೀಡಿದ್ದಾರೆ ಎಂದು ಅವರು ಹೇಳಿದರು. ‌
ಇದಲ್ಲದೆ ಅಮ್ಟೂರು ಗ್ರಾಮದ ಸಮಗ್ರ ಅಭಿವೃದ್ಧಿಗೆ ಶಾಸಕರು ಅನುದಾನ ಬಿಡುಗಡೆಗೊಳಿಸಿದ್ದಾರೆ.

ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ರಾದ ಜಯಲಕ್ಮಿ ಭಟ್, ತಾ.ಪಂ.ಸದಸ್ಯ ಮಹಾಬಲ ಆಳ್ವ, ಗ್ರಾ.ಪಂ.ಉಪಾಧ್ಯಕ್ಷ ಮಹಮ್ಮದ್ ಮುಸ್ತಫಾ ಗ್ರಾ.ಪಂ.ಸದಸ್ಯ ರಾದ ಗೋಪಾಲಕೃಷ್ಣ ಪೂವಳ, ರಾಜೇಶ್ ಕೊಟ್ಟಾರಿ, ಗೋಪಾಲ ಪೂಜಾರಿ, ಜಯಂತ್ ಗೌಡ, ಮೋನಪ್ಪ ದೇವಸ್ಯ, ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಮಡ್ಲಮಜಲು, ಉದ್ಯಮಿ ಜಗದೀಶ್ ಬೆಜ್ಜಾರ್, ಹಾಗೂ ಗ್ರಾಮದ ಪ್ರಮುಖರಾದ ರಮೇಶ್ ಭಟ್, ಸೀತಾರಾಮ ಭಟ್ ಮತ್ತಿತರರು ಉಪಸ್ಥಿತರಿದ್ದರು.

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...