ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಷಷ್ಟ್ಯಬ್ಧದ ಸವಿ ನೆನಪಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಪು ವಲಯದ ವತಿಯಿಂದ ನಡೆದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯ ಉಳಿಕೆ ಹಣದಲ್ಲಿ ಕುದ್ದುಪದವು ಎಂಬಲ್ಲಿ ನೂತನವಾದ ಪ್ರಯಾಣಿಕರ ತಂಗುದಾಣವನ್ನು ನಿರ್ಮಿಸಿ ಲೋಕಾರ್ಪಣೆಗೊಳಿಸಲಾಯಿತು.
ಪ್ರಯಾಣಿಕರು ಅವಶ್ಯಕವಾಗಿ ಬೇಕಾಗಿದ್ದ ಈ ಸ್ಥಳದಲ್ಲಿ ಸುಂದರ ವಿನ್ಯಾಸದದಲ್ಲಿ ತಂಗುದಾಣ ನಿರ್ಮಿಸಲಾಗಿದ್ದು, ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ., ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಕೇಪು ವಲಯ ಸ್ವ-ಸಹಾಯ ಸಂಘಗಳ ಅಧ್ಯಕ್ಷ ಜಯಾನಂದ, ಕೇಪು ಗ್ರಾಮ ಪಂಚಾಯಿತಿ ಅಧ್ಯಕ್ಷ ತಾರಾನಾಥ ಆಳ್ವ ಕುಕ್ಕೆಬೆಟ್ಟು, ಉಪಾಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೆಕ್ಕರೆ, ಪುಣಚ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಜಿನಚಂದ್ರ ಜೈನ್, ಕೇಪು ಗ್ರಾಮ ಪಂಚಾಯಿತಿಯ ಸದಸ್ಯರಾದ ಅಬ್ದುಲ್ ಕರೀಂ, ವಿಠಲ ಕೋಪ್ರೆ, ಗುತ್ತಿಗೆದಾರ ಎಸ್.ನಾರಾಯಣ್ ಉಪಸ್ಥಿತರಿದ್ದರು. ಯೋಜನೆಯ ಕೇಪು ವಲಯದ ಮೇಲ್ವೀಚಾರಕ ಸಂದೇಶ್ ಪಿ. ಕಾರ್ಯಕ್ರಮ ನಿರೂಪಿಸಿದರು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here