Friday, April 19, 2024

ಅಳಿಕೆ: ಸತ್ಯಸಾಯಿ ವಿಹಾರ- ಗಂಗೆಮೂಲೆ ರಸ್ತೆ ಉದ್ಘಾಟನೆ

ವಿಟ್ಲ: ಅಳಿಕೆ ಗ್ರಾಮದ ಸತ್ಯಸಾಯಿ ವಿಹಾರ- ಕೊಲ್ಯ- ಗಂಗೆಮೂಲೆ ಗ್ರಾಮ ಪಂಚಾಯಿತಿ ರಸ್ತೆಯನ್ನು ಗ್ರಾಮ ಪಂಚಾಯಿತಿ ಅನುದಾನ ಹಾಗೂ ಮಹಾತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ೧೩ ಲಕ್ಷ ರೂ. ವೆಚ್ಚದಲ್ಲಿ ನಿರ್‍ಮಾಣ ಮಾಡಿದ ಕಾಂಕ್ರೀಟ್ ರಸ್ತೆಯನ್ನು ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಉದ್ಘಾಟಿಸಿದರು.
೨ ಲಕ್ಷ ರೂ. ವೆಚ್ಚದಲ್ಲಿ ಚೆಂಡುಕಳ ಕುಡಿಯುವ ನೀರಿನ ಯೋಜನೆಗೆ ಹೊಸ ಕೊಳವೆ ಬಾವಿ ಹಾಗೂ ನೀರಿನ ಸಂಪರ್ಕ, 1.25ಲಕ್ಷ ವೆಚ್ಚದಲ್ಲಿ ದರ್ಬೆ ಎಂಬಲ್ಲಿ ನಿರ್‍ಮಿಸಲಾದ ನೂತನ ನೀರಿನ ಟ್ಯಾಂಕ್ ಅನ್ನು ಇದೇ ಸಂದರ್ಭ ಉದ್ಘಾಟಿಸಲಾಯಿತು. ಉಪಾಧ್ಯಕ್ಷೆ ಸರಸ್ವತಿ, ಸದಸ್ಯರಾದ ಸುಧಾಕರ ಮಡಿಯಾಲ, ರವೀಶ್, ಪಿಡಿಒ ಜಿನ್ನಪ್ಪ ಗೌಡ, ಬಾಲಕೃಷ್ಣ ಕಾರಂತ ಎರುಂಬು, ನರಸಿಂಹ ಬಲ್ಲಾಳ್, ಶಿವಪ್ರಸಾದ್ ಮೆಣಸಿನಂಗಡಿ, ಬಾಬು ಗೌಡ, ಮೋಹನಾನಂದ ಶೆಟ್ಟಿ, ಗುತ್ತಿಗೆದಾರರಾದ ಗೋಪಾಲ್ ನಾಯಕ್ ಉಪಸ್ಥಿತರಿದ್ದರು.

More from the blog

ಏಪ್ರಿಲ್ 25, 26ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಏ.25ರ ಸಂಜೆ 6ರಿಂದ 26ರ ರಾತ್ರಿ 8ರ...

ಲೋಕಸಭಾ ಚುನಾವಣೆ : ಎ.20 ರಂದು‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೃಹತ್ ಚುನಾವಣಾ ಪ್ರಚಾರ

ಬಂಟ್ವಾಳ: ಲೋಕಸಭಾ ಚುನಾವಣೆಯ ಪ್ರಚಾರ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಎ.20 ರಂದು‌ ಶನಿವಾರ ಮಧ್ಯಾಹ್ನ 2.30 ಕ್ಕೆ ಗಂಟೆಗೆ ಬಿಸಿರೋಡಿನ ಬ್ರಹ್ಮ ಶ್ರೀನಾರಾಯಣ ಗುರು ಮಂದಿರದಲ್ಲಿ ಬೃಹತ್ ಚುನಾವಣಾ...

ರಾಜ್ಯದಲ್ಲಿ ಮತ್ತೆ ಏರಿದ ತಾಪಮಾನ

ಬೆಂಗಳೂರು: ಕಳೆದೊಂದು ವಾರದಿಂದ ತಗ್ಗಿದ್ದ ತಾಪಮಾನ ಮತ್ತೆ ಏರಿಕೆಯಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ಬಹುತೇಕ ಕಡೆಗಳಲ್ಲಿ ಗರಿಷ್ಠ ಉಷ್ಣಾಂಶವು 2ರಿಂದ 3 ಡಿಗ್ರಿ ಏರಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಅಯೋಧ್ಯೆಯಲ್ಲಿ ಅದ್ಧೂರಿ ರಾಮನವಮಿ ; ರಾಮಲಲ್ಲಾ ಹಣೆ ಮೇಲೆ ಸೂರ್ಯ ತಿಲಕ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಬಳಿಕ ಅಯೋಧ್ಯೆಯಲ್ಲಿ ಮೊದಲ ಶ್ರೀರಾಮನವಮಿಯನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಮೊದಲ ರಾಮನವಮಿಯಂದು ರಾಮಲಲ್ಲಾನಿಗೆ ಸೂರ್ಯನ ತಿಲಕ ಸ್ಪರ್ಶಿಸಿದ್ದು, ಸೂರ್ಯವಂಶಸ್ಥನಿಗೆ ಸೂರ್ಯನ ಅಭಿಷೇಕ ನೆರವೇರಿಸಲಾಗಿದೆ. ರಾಮನವಮಿ ಅಂಗವಾಗಿ ಮಧ್ಯಾಹ್ನ 12 ಗಂಟೆಗೆ...