Thursday, April 11, 2024

ನೇತ್ರಾವತಿ ನದಿಯಲ್ಲಿ ಅಪರಿಚಿತ ಶವ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಜೈನರಪೇಟೆ ಸುಣ್ಣದಗೂಡು ನೇತ್ರಾವತಿ ಹಳೆಯ ಸೇತುವೆಯ ಪಕ್ಕದಲ್ಲಿ ನದಿಯಲ್ಲಿ ಅಪರಿಚಿತ ಶವ ಕಂಡು ಬಂದಿದೆ.
ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಅಪರಿಚಿತ ಶವ ಬೆಳಿಗ್ಗೆ ಕಂಡು ಬಂದಿದ್ದು , ಸ್ಥಳೀಯ ನಿವಾಸಿ ಅಬೂಸಾಲಿ ಪಿ.ಜೆ . ನಗರ ಠಾಣಾ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.


ಈ ಮಾಹಿತಿ ಮೇಲೆ ಬಂಟ್ವಾಳ ನಗರ ಪೋಲೀಸ್ ಎಸ್.ಐ.ಚಂದ್ರಶೇಖರ್ ಹಾಗೂ ಅಪರಾಧ ವಿಭಾಗದ ಎಸ್ .ಐ.‌ಸುಧಾಕರ ತೋನ್ಸೆ ಸ್ಥಳಕ್ಕೆ ಬೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗೂಡಿನ ಬಳಿಯ ಈಜುಗಾರರು ಶವವನ್ನು ಮೇಲಕ್ಕೆತ್ತಿದ್ದಾರೆ. ಶವದ ಅಂಗಿಯಲ್ಲಿ ಪೊಳಲಿ ನಿವಾಸಿ ಎಂಬುದಕ್ಕೆ ಚೀಟಿಯೊಂದು ದೊರೆತಿದ್ದು ಪೋಲೀಸರು ವಿಳಾಸ ದ ತನಿಖೆ ನಡೆಸುತ್ತಿದ್ದಾರೆ.
ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನಾ, ಕಾಲು ಜಾರಿ ನದಿಗೆ ಬಿದ್ದು ಸತ್ತು ಹೋಗಿದ್ದಾನಾ ಅಥವಾ ಇನ್ನಾವುದೋ ಕಾರಣದಿಂದ ಸತ್ತಿದ್ದಾನಾ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ.

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...

300 ರೂ. ಗಡಿಯತ್ತ ಹಸಿ ಕೊಕ್ಕೊ… 900 ರೂ. ಗಡಿಯತ್ತ ಒಣ ಕೊಕ್ಕೊ

ಪುತ್ತೂರು: ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹಸಿ ಕೊಕ್ಕೊ, ಒಣ ಕೊಕ್ಕೊ ಧಾರಣೆ ಮತ್ತಷ್ಟು ಜಿಗಿದಿದ್ದು, ಹೊರ ಮಾರುಕಟ್ಟೆಯಲ್ಲಿಯೂ ಅತ್ಯಧಿಕ ದರ ದಾಖಲಾಗಿದೆ. ಒಣ ಕೊಕ್ಕೊ 900 ರೂ. ಗಡಿಯತ್ತ, ಹಸಿ ಕೊಕ್ಕೊ 300 ರೂ....

ಬಂಟ್ವಾಳದ ಕುದ್ಕೋಳಿ: ಹೊತ್ತಿ ಉರಿದ ಡಸ್ಟರ್ ಕಾರು

ಬಂಟ್ವಾಳ: ಬಂಟ್ವಾಳ- ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಡಸ್ಟರ್ ಕಾರೊಂದು ಏಕಾಏಕಿ ಬೆಂಕಿ ಹತ್ತಿ ಉರಿದ ಘಟನೆ ಇಂದು ಬೆಳಗ್ಗೆ (ಸೋಮವಾರ) ನಡೆದಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬಳಿಕ ಸ್ಥಳೀಯರು ಹಾಗೂ ಬಂಟ್ವಾಳ...