Wednesday, April 10, 2024

ಮತದಾನ ನಮ್ಮ ಹಕ್ಕು ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ಮತದಾನದ ಮಹತ್ವ ಸಾರುವ ಘೋಷಣೆಗಳನ್ನು ಕೂಗುತ್ತಾ ಕಾಲ್ನಡಿಗೆ ಜಾಥಾ ಶನಿವಾರ ಬಿ.ಸಿ.ರೋಡಿನಲ್ಲಿ ನಡೆಯಿತು ಕೈಕಂಬ ಪೊಳಲಿ ದ್ವಾರದಿಂದ ಆರಂಭವಾದ ಜಾಥ,  ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಸಂಪನ್ನಗೊಂಡಿತು. ಬಳಿಕ ಹೆದ್ದಾರಿಯಲ್ಲಿ ವೃತ್ತಾಕಾರದ ಮಾನವ ಸರಪಳಿ ಹಾಗೂ ಮತದಾನದ ಪ್ರತಿಜ್ಞೆ, ಜಾಗೃತಿ ಗೀತೆ ಮತ್ತು ವಿವಿ ಪ್ಯಾಟ್ ಕುರಿತು ಸಾರ್ವಜನಿಕರಿಗೆ ಪ್ರಾತ್ಯಕ್ಷಿಕೆ ನೀಡುವ ಕಾರ್ಯವು ಅಧಿಕಾರಿಗಳಿಂದ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ, ಬಂಟ್ವಾಳ ತಾಲೂಕು ಪಂಚಾಯತ್ ವತಿಯಿಂದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಮತದಾನ ಜಾಗೃತಿಮತ್ತು ಮಾಹಿತಿ ಕಾರ್ಯಕ್ರಮಕ್ಕೆ ವಕೀಲರ ಸಂಘ (ರಿ) ಬಂಟ್ವಾಳ, ಆಟೊ ಚಾಲಕ ಮಾಲೀಕರ ಸಂಘ (ಬಿಎಂಎಸ್) (ರಿ) ಬಂಟ್ವಾಳ, ಗ್ಯಾರೇಜು ಮಾಲೀಕರ ಸಂಘ ಬಂಟ್ವಾಳ, ದ.ಕ.ಜಿಲ್ಲಾ ಟೂರಿಸ್ಟ್ಕಾರು ಮತ್ತು ವ್ಯಾನ್ ಚಾಲಕರ ಸಂಘ (ರಿ) ಬಂಟ್ವಾಳ ಬಿ.ಸಿರೋಡ್, ಬಂಟ್ವಾಳ ತಾಲೂಕು ಸಾಮಾಜಿಕ ನ್ಯಾಯಪರ ಸಮಿತಿ, ಡ್ರೈವರ್ ಅಸೋಸಿಯೇಶನ್ ಬಂಟ್ವಾಳ, ಸೋಶಿಯಲ್ ಡೆಮಾಕ್ರಾಟಿಕ್ ಆಟೊ ಚಾಲಕರ ಯೂನಿಯನ್ (ರಿ),  ಬಂಟ್ವಾಳ ಮತ್ತು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗ ನೀಡಿತ್ತು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಸೆಲ್ವಮಣಿ ಆರ್ ಅವರು ಮತದಾನದ ಮಹತ್ವದ ಕುರಿತು ಮಾಹಿತಿ ನೀಡಿ, ವಿವಿ ಪ್ಯಾಟ್  ಮತ್ತು ಮತಯಂತ್ರದ ವಿಚಾರವನ್ನು ವಿವರಿಸಿದರು. ಬಳಿಕ ಮಾದರಿ ಮತಯಂತ್ರವನ್ನು ಒತ್ತುವುದರ ಮೂಲಕ ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿದರು. ಈ ಸಂದರ್ಭ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅದಾವತ್, ಸಹಾಯಕ ಚುನಾವಣಾಧಿಕಾರಿ ಮಹೇಶ್, ಬಂಟ್ವಾಳ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾರಾಯಣ ಶೆಟ್ಟಿ, ಬಂಟ್ವಾಳ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉಮೇಶ್ ಭಟ್, ಇಂಜಿನಿಯರ್ ಅರುಣ್,  ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು, ಬಂಟ್ವಾಳ ಪುರಸಭೆ ಮುಖ್ಯಾಧಿಕಾರಿ ಮೇಬಲ್ ಡಿಸೋಜ, ಪುರಸಭೆ ಪರಿಸರ ಇಂಜಿನಿಯರ್ ಯಾಸ್ಮಿನ್, ತಾಪಂ ಸಹಾಯಕ ನಿರ್ದೇಶಕ ಡಿ.ಪ್ರಶಾಂತ್ ಬಳಂಜ, ತಾಪಂ ವಲಯ ಮೇಲ್ವಿಚಾರಕ ಕುಶಾಲಪ್ಪ, ಪೊಲೀಸ್ ಸರ್ಕಲ್ ಇನ್ಸಪೆಕ್ಟರ್ ಶರಣಗೌಡ ಪಾಟೀಲ್, ಎಸ್ಸೈಗಳಾದ ಚಂದ್ರಶೇಖರ್, ಪ್ರಸನ್ನ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮತ್ತು ವಿವಿಧ ಸಂಘ, ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಾಥಾಕ್ಕೆ ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಚಾಲನೆ ನೀಡಿದರು. ಈ ಸಂದರ್ಭ ವಿವಿಧ ಸಂಘಟನೆಗಳ ಮುಖ್ಯಸ್ಥರು ಹಾಜರಿದ್ದರು. ಬಳಿಕ ಕಾಲ್ನಡಿಗೆಯಲ್ಲಿ ಜಾಥಾ ಬಿ.ಸಿ.ರೋಡಿನವರೆಗೆ ಸಾಗಿತು. ಈ ಸಂದರ್ಭ ಮತದಾನದ ಮಹತ್ವದ ಕುರಿತು ಸಂದೇಶಗೀತೆಗಳನ್ನು ಹಾಡಲಾಯಿತು.  ಮಂಜು ವಿಟ್ಲ ಕಾರ್ಯಕ್ರಮ ನಿರ್ವಹಿಸಿದರು.

ಸಂಜೆಯವರೆಗೂ ಅಧಿಕಾರಿಗಳಿಂದ ವಿವಿ ಪ್ಯಾಟ್ ಮತ್ತು ಮತಯಂತ್ರದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯ ಬಿ.ಸಿ.ರೋಡ್ ನಲ್ಲಿರುವ ಪುರಸಭಾ ಬಸ್ ನಿಲ್ದಾಣದಲ್ಲಿ ನಡೆಸಲಾಯಿತು.

 ಜಾಗೃತಿ ಗೀತೆ ಹಾಡಿದ ಕಾರ್ಯನಿರತ ಪತ್ರಕರ್ತರು

ಮತದಾರ ಕೇಳೊ ಇಲ್ಲಿ, ನಾವ್ ಹೇಳೊ ಮಾತ ಕಿವಿಗೊಟ್ಟು ಕೇಳೊ ಇಲ್ಲಿ… ಎಂದು ನಾನಾ ವಿಚಾರಗಳು ಇರುವ ಜಾಗೃತಿ ಗೀತೆಯನ್ನು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಬಿ.ಸಿ.ರೋಡಿನಲ್ಲಿ ಸಂಘಟಿಸಿದ ಮಾನವ ಸರಪಳಿಯಲ್ಲಿ ಮಧ್ಯೆ ಹಾಡಿದರು. ರಂಗಕರ್ಮಿಯೂ ಆಗಿರುವ ಪತ್ರಕರ್ತ ಮೌನೇಶ ವಿಶ್ವಕರ್ಮ ಹಾಡಿಗೆ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಹರೀಶ ಮಾಂಬಾಡಿ, ಜತೆ ಕಾರ್ಯದರ್ಶಿ ಅಬ್ದುಲ್ ರೆಹಮಾನ್ ತಲಪಾಡಿ, ಕೋಶಾಧಿಕಾರಿ ಯಾದವ ಕುಲಾಲ್ ಅಗ್ರಬೈಲ್, ಹಿರಿಯ ಪತ್ರಕರ್ತರಾದ ವೆಂಕಟೇಶ್ ಬಂಟ್ವಾಳ, ರತ್ನದೇವ್ ಪುಂಜಾಲಕಟ್ಟೆ, ಸಂದೀಪ್ ಸಾಲ್ಯಾನ್, ಸಾಥ್ ನೀಡಿದರು. ನೀವು ಹಾಕುವ ಒಂದು ಮತ ಕಾಯುವುದು ದೇಶದ ಹಿತ ಎಂಬ ಸಂದೇಶ ಹಾಡಿನಲ್ಲಡಗಿದೆ.

More from the blog

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...

ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ

ಮಂಗಳೂರು ಹಾಗೂ ಬಿಸಿರೋಡ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಟ್ ಎಜುಕೇಶನ್ ಸಂಸ್ಥೆಯ ವತಿಯಿಂದ 2024ರ ಪ್ರಾಕ್ಟಿಕಲ್ ಪರೀಕ್ಷೆ ಸೋಮವಾರ ಬಿಸಿರೋಡ್ ಶಾಖೆಯಲ್ಲಿ ನಡೆಯಿತು. ಟೀಚರ್ಸ್ ಟ್ರೈನಿಂಗ್ ವಿಭಾಗದ ವಿದ್ಯಾರ್ಥಿನಿಯರಿಂದ ಪ್ರಸ್ತುತ ವರ್ಷದಲ್ಲಿ ತಯಾರಿಸಿದ ಎಲ್ಲಾ ಕಲಿಕಾ...