ಬಂಟ್ವಾಳ: ಬ್ರಹ್ಮಕಲಶೋತ್ಸವ ಸಡಗರದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ವಿಧಾನಸಭೆಯ ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಭೇಟಿ ನೀಡಿದರು. ದೇವಳದ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಶಾಸಕ ಯು.ರಾಜೇಶ್ ನಾಯ್ಕ್, ಬಂಟ್ವಾಳ ಕ್ಷೇತ್ರ ಬಿಜೆಪಿ ಸಮಿತಿ ಅಧ್ಯಕ್ಷ ದೇವದಾಸ ಶೆಟ್ಟಿ ಮತ್ತಿತರ ಗಣ್ಯರು ಬಿಎಸ್ ವೈ ಅವರನ್ನು ಸ್ವಾಗತಿಸಿದರು.

 

ದೇವಳದ ವೈಭವ, ಉಗ್ರಾಣದಲ್ಲಿ ಸಂಗ್ರಹವಾದ ಹೊರೆಕಾಣಿಕೆಯನ್ನು ವೀಕ್ಷೀಸಿದ ಬಿಎಸ್ ವೈ ಕಣ್ಮನತುಂಬಿಕೊಂಡರು. ಸ್ವಯಂಸೇವಕರ  ಸೇವೆಯನ್ನು ಶ್ಲಾಘಿಸಿದರು. ದೇವಳದ ಅರ್ಚಕರು ಪ್ರಸಾದ ನೀಡಿ ಹರಸಿದರು.  ಶಾಸಕ ಯು.ರಾಜೇಶ್ ನಾಯ್ಕ್ ಅವರು ದೇವಳದ ಐತಿಹ್ಯವನ್ನು ಮಾಜಿ ಸಿಎಂ ಬಿಎಸ್ ವೈ ಅವರಿಗೆ ವಿವರಿಸಿದರು. ಈ ಸಂದರ್ಭ ಸಂಸದ ರಾಘವೇಂದ್ರ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ,  ವಿಧಾನಸಭೆಯ ಮಾಜಿ ಉಪಸಭಾಪತಿ ಯೋಗೀಶ್ ಭಟ್,ಮಾಜಿ ಶಾಸಕ ಪದ್ಮನಾಭಕೊಟ್ಟಾರಿ, ಬಿಜೆಪಿ ಮುಖಂಡರಾದ ಜಗದೀಶ್ ಅಧಿಕಾರಿ,ರವೀಂದ್ರ ಶೆಟ್ಡಿ ಉಳಿದೊಟ್ಟು, ಪವನ್ ಕುಮಾರ್ ಶೆಟ್ಟಿ, ಉದಯಕುಮಾರ್ ರಾವ್ ಬಂಟ್ವಾಳ, ಪುರುಷೋತ್ತಮ ಶೆಟ್ಟಿ ವಾಮದಪದವು, ಜಿ.ಆನಂದ, ತಾ.ಪಂ.ಸದಸ್ಯ ಯಶವಂತ ಪೊಳಲಿ, ಮಾಜಿ ಸದಸ್ಯ ವೆಂಕಟೇಶ್ ನಾವುಡ, ಮಂಜುನಾಥ ಶೆಟ್ಟಿ ಶಡ್ಡೆ ಮೊದಲಾದವರಿದ್ದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here