


ಬಂಟ್ವಾಳ: ವಿಶ್ವ ಗುಬ್ಬಿ ದಿನದ ಅಂಗವಾಗಿ ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗಾಗಿ ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರದಲ್ಲಿ ಬುಧವಾರ ಬಂಟ್ವಾಳ ವಲಯ ಅರಣ್ಯಾಧಿಕಾರಿ ಕಛೇರಿಯಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ ನಡೆಸಲಾಯಿತು.
ಗುಬ್ಬಚ್ಚಿಗೂಡು ಕಾರ್ಯಾಗಾರದ ಸಂಚಾಲಕಿ ರಮ್ಯಾನಿತ್ಯಾನಂದ ಶೆಟ್ಟಿ ಅವರು ಮಾತನಾಡಿ, ಪಕ್ಷಿಗಳಿಗೆ ಸರಿಯಾದ ಆವಾಸ ದೊರಕದೆ ಆಹಾರ, ನೀರು ಸಿಗದೆ ವಲಸೆ ಹೋಗುವ ಪಕ್ಷಿಗಳನ್ನು ಉಳಿಸುವ ನಿಟ್ಟಿನಲ್ಲಿ ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರ ನಡೆಸಲಾಗುತ್ತದೆ. ಸಾರ್ವಜನಿಕರಿಂದ ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ ಎಂದರು.
ಈ ಸಂದರ್ಭದಲ್ಲಿ ಬಂಟ್ವಾಳ ಅರಣ್ಯ ವಲಯಾಧಿಕಾರಿ ಬಿ.ಸುರೇಶ್ ಅವರಿಗೆ ಪಕ್ಷಿಗಳಿಗೆ ನೀರು, ಧಾನ್ಯ ಇಡುವ ಮಣ್ಣಿನ ಪಾತ್ರೆಯನ್ನು ಉಚಿತವಾಗಿ ಗುಬ್ಬಚ್ಚಿಗೂಡು ಜಾಗೃತಿ ಕಾರ್ಯಾಗಾರದ ಸಂಚಾಲಕಿ ರಮ್ಯಾ ನಿತ್ಯಾನಂದ ಶೆಟ್ಟಿ ನೀಡಿದರು. ಅರಣ್ಯ ಇಲಾಖಾ ಸಿಬಂದಿಗಳು ಉಪಸ್ಥಿತರಿದ್ದರು.


