ಬಂಟ್ವಾಳ: ಕಂದಾಯ ಇಲಾಖಾ ಸಿಬ್ಬಂದಿಗಳು,ಗ್ರಾ.ಪಂ.ಬಿಲ್ ಕಲೆಕ್ಟರ್ ಗಳು, ಕಂದಾಯ ಇಲಾಖೆಯ ಸಿಬ್ಬಂದಿ ಗಳು, ಹಾಗೂ ಕ್ರಷಿ ಇಲಾಖಾ ಸಿಬ್ಬಂದಿ ಗಳಿಗೆ ಮತದಾರರ ಪ್ರತಿಜ್ಞೆ ವಿಧಿ ಬೋಧನೆ ಕಾರ್ಯಕ್ರಮ ತಾಲೂಕು ಪಂಚಾಯತ್ ನ ಎಸ್.ಜಿ.ಎಸ್.ವೈ ಸಭಾಂಗಣದಲ್ಲಿ ನಡೆಯಿತು.



ತಾ.ಪಂ.ಇ.ಒ.ರಾಜಣ್ಣ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು.
ಪ್ರಜಾಪ್ರಭುತ್ವ ದಲ್ಲಿ ಧ್ರಡ ವಿಶ್ವಾಸವುಳ್ಳ ಭಾರತದ ಪೌರರಾದ ನಾವು, ನಮ್ಮ ದೇಶದ ಪ್ರಜಾಸತ್ತಾತ್ಮಕ ಸಂಪ್ರದಾಯ ಗಳು ಮತ್ತು ಮುಕ್ತ ನ್ಯಾಯಸಮ್ಮತ ಮತ್ತು ಶಾಂತಿಯುತ ಚುನಾವಣೆ ಗಳ ಘನತೆ ಯನ್ನು ಎತ್ತಿಹಿಡಿಯುತ್ತೇವೆಂದು ಮತ್ತು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಮತ್ತು ಧರ್ಮ ಜನಾಂಗ , ಜಾತಿ, ಭಾಷೆ ಅಥವಾ ಯಾವುದೇ ಪ್ರೇರಣೆ ಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತಚಲಾಯಿಸುತ್ತೇವೆಂದು ಈ ಮೂಲಕ ಪ್ರತಿಜ್ಞೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕ್ರಷಿ ಇಲಾಖೆ ಅಧಿಕಾರಿ ನಾರಾಯಣ ಶೆಟ್ಟಿ, ಉಪತಹಶೀಲ್ದಾರ್ ರಾಜೇಶ್ ನಾಯಕ್ ಹಾಗೂ ತಾಲೂಕು ಪಂಚಾಯತ್ ಅಧಿಕಾರಿ ಪ್ರಶಾಂತ್ ಉಪಸ್ಥಿತರಿದ್ದರು.