ವಿಟ್ಲ: ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದಲ್ಲಿ ಮಾ.24ನೇ ಆದಿತ್ಯವಾರ ಬೆಳಿಗ್ಗೆ ಒಡಿಯೂರು ಶ್ರೀ ಚ್ಯಾರಿಟೇಬಲ್ ಟ್ರಸ್ಟ್ (ರಿ.) ಸಂಚಾಲಿತ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಸಹಯೋಗದಲ್ಲಿ ರೋಟರಿ ಕ್ಲಬ್ ವಿಟ್ಲ ಮತ್ತು ಜೇಸಿಐ ವಿಟ್ಲ, ಇಂಡಿಯನ್ ಡೆಂಟಲ್ ಎಸೋಸಿಯೇಶನ್, ಪುತ್ತೂರು ಇದರ ವತಿಯಿಂದ ಉಚಿತ ದಂತ-ಕಣ್ಣು-ಮಧುಮೇಹ ತಪಸಣಾ ಮತ್ತು ಚಿಕಿತ್ಸಾ ಶಿಬಿರ ಏರ್ಪಡಿಸಲಾಗಿದೆ. ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳರು ಶಿಬಿರವನ್ನು ಉದ್ಘಾಟಿಸಲಿದ್ದಾರೆ.
ಮಣಿಪಾಲ ಕಾಲೇಜು ಆಫ್ ಡೆಂಟಲ್ ಸೈನ್ಸಸ್ ಮಂಗಳೂರು ಇವರಿಂದ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ ಮತ್ತು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ, ಉಡುಪಿ ಇವರಿಂದ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಮತ್ತು ಪುಷ್ಪಕ್ ಹೆಲ್ತ್ ಕೇರ್ ವಿಟ್ಲ ಇವರಿಂದ ಮಧುಮೇಹ ತಪಾಸಣಾ ಶಿಬಿರ ನಡೆಯಲಿದೆ. ಸದ್ರಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು.
