Saturday, October 21, 2023

ಏ.2ರಂದು ಬಿ.ಸಿ.ರೋಡಿನಲ್ಲಿ ಉಚಿತ ವೈದ್ಯಕೀಯ ಶಿಬಿರ

Must read

ಬಂಟ್ವಾಳ: ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ, ಬಂಟ್ವಾಳ ವಲಯ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಶ್ರೀ ಶಂಕರ ಪ್ರತಿಷ್ಠಾನ, ಮಂಗಳೂರಿನ ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘ ಆಶ್ರಯದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆ, ಎ.ಜೆ.ಇನ್ಸಿಟಿಟ್ಯೂಟ್ ಆಫ್ ಡೆಂಟಲ್ ಸೈನ್ಸ್ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ಶಿಬಿರ ಏ.2ರಂದು ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ರಾಮಕೃಷ್ಣ ರಾವ್, ಮಂಗಳೂರು ಸುಬ್ರಹ್ಮಣ್ಯ ಸಭಾ ಅಧ್ಯಕ್ಷ ಹರ್ಷಕುಮಾರ್ ಕೇದಗೆ ಮತ್ತು ಶ್ರೀ ಸುಬ್ರಹ್ಮಣ್ಯ ಸಹಕಾರ ಸಂಘದ ಅಧ್ಯಕ್ಷ ಕರುಣಾ ರಾವ್ ಬೆಳ್ಳೆ ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಂಕರ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷ ಕೆ.ಮೋಹನ ರಾವ್, ಸೇವಾಂಜಲಿ ಆಡಳಿತ ಟ್ರಸ್ಟಿ ಕೆ.ಕೆ.ಪೂಂಜಾ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದ ಬಂಟ್ವಾಳ ವಲಯ ಅಧ್ಯಕ್ಷ ಅನಾರು ಕೃಷ್ಣ ಶರ್ಮಾ, ಶ್ರೀ ಸುಬ್ರಹ್ಮಣ್ಯ ಸಹಕಾರಿ ಸಂಘದ ಅಧ್ಯಕ್ಷ ನಾಗೇಶ್ ರಾವ್ ಪೊಳಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದ್ದು, ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಶಿಬಿರ ನಡೆಯಲಿದೆ ಎಂದು ಮಾಹಿತಿ ನೀಡಿದೆ.

More articles

Latest article